ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಅಲ್ಪಸಂಖ್ಯಾತ ಸಮುದಾಯದಲ್ಲಿ ಹುಟ್ಟಿ ಮುಖ್ಯಮಂತ್ರಿಯಾದ ಗುಂಡೂರಾವ್ ದೂರದೃಷ್ಟಿಯ ನಾಯಕರಾಗಿದ್ದರು. ಆರೋಗ್ಯ, ಶಿಕ್ಷಣ, ಕುಡಿಯುವ ನೀರಿನ ೨ನೇ ಹಂತದ ಯೋಜನೆ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ಒಳಚರಂಡಿ, ಪ್ರಥಮ ದರ್ಜೆ ಕಾಲೇಜು ಸ್ಥಾಪನೆ ಮೂಲಕ ಕುಶಾಲನಗರ ಇಂದು ಪುರಸಭೆಯಾಗಿ, ವ್ಯಾಪಾರ ಮತ್ತು ಪ್ರವಾಸಿ ಕೇಂದ್ರವಾಗಿ ಬೆಳೆಯಲು ಕಾರಣರಾದರು. ಇಚ್ಛಾಶಕ್ತಿ ಕೊರತೆಯಿಂದ ಇಷ್ಟು ವರ್ಷ ಪ್ರತಿಮೆ ಸ್ಥಾಪನೆ ಸಾಧ್ಯವಾಗಿರಲಿಲ್ಲ. ಈಗ ಶಾಸಕರ ಇಚ್ಛಾಶಕ್ತಿಯಿಂದ ಸಾಧ್ಯವಾಗುತ್ತಿರುವುದು ಸಂತಸದ ಸಂಗತಿ ಎಂದರು.