ಸ್ಪರ್ಧಾತ್ಮಕ ಯುಗದಲ್ಲಿ ಆಂಗ್ಲಭಾಷೆ ಕಲಿಕೆ ಅನಿವಾರ್ಯ

ಸೋಮವಾರಪೇಟೆ ಕಾಜೂರು ಕ್ಲಸ್ಟರ್ ವತಿಯಿಂದ ಕ್ಲಸ್ಟರ್ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕರು ಹಾಗೂ ಸೇವೆಯಿಂದ ನಿವೃತ್ತರಾದ ಶಿಕ್ಷಕರನ್ನು ಬೇಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಕೃಷ್ಣಪ್ಪ, ಯಶವಂತ್, ಸರಳಾ ಕುಮಾರಿ ಇದ್ದರು.
ಸೋಮವಾರಪೇಟೆ ಕಾಜೂರು ಕ್ಲಸ್ಟರ್ ವತಿಯಿಂದ ಕ್ಲಸ್ಟರ್ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕರು ಹಾಗೂ ಸೇವೆಯಿಂದ ನಿವೃತ್ತರಾದ ಶಿಕ್ಷಕರನ್ನು ಬೇಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಕೃಷ್ಣಪ್ಪ, ಯಶವಂತ್, ಸರಳಾ ಕುಮಾರಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸರ್ಕಾರಿ ಕನ್ನಡ ಶಾಲೆಗಳ ಉಳಿವಿಗೆ ಎಲ್ಲರೂ ಪ್ರಯತ್ನಿಸಲಿ
  • ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಸಲಹೆ
  • ಬೀಳ್ಕೊಡುಗೆ ಸಮಾರಂಭ
ಸೋಮವಾರಪೇಟೆ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಆಂಗ್ಲ ಮಾಧ್ಯಮ ಕಲಿಕೆ ಅನಿವಾರ್ಯವಾಗಿದ್ದರೂ ಸರ್ಕಾರಿ ಕನ್ನಡ ಶಾಲೆಗಳ ಉಳಿವಿಗೆ ಎಲ್ಲರೂ ಪ್ರಯತ್ನಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಹೇಳಿದರು.
ಶಾಲಾ ಶಿಕ್ಷಣ ಇಲಾಖೆ, ಕಾಜೂರು ಕ್ಲಸ್ಟರ್ ವತಿಯಿಂದ ಕ್ಲಸ್ಟರ್ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಯಾದ ಶಿಕ್ಷಕರು ಹಾಗೂ ಸೇವೆಯಿಂದ ನಿವೃತ್ತರಾದ ಶಿಕ್ಷಕರಿಗೆ ಬೇಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಆಯೋಸಿದ್ದ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿಯಿಂದ ಇಂಗ್ಲಿಷ್ ಮಾಧ್ಯಮದ ಶಿಕ್ಷಣ ಪ್ರಾರಂಭವಾಗಿದೆ. ಸರ್ಕಾರಿ ಶಾಲೆಗಳಲ್ಲಿ ಪ್ರತಿಭಾವಂತ ಹಾಗೂ ನುರಿತ ಶಿಕ್ಷಕರು ಇದ್ದಾರೆ. ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಮುಂದಾಗಬೇಕೆಂದು ಮನವಿ ಮಾಡಿದರು.
ಕಾಜೂರು ಸರ್ಕಾರಿ ಪ್ರಾಥಮಿಕ ಶಾಲೆ ನಿವೃತ್ತ ಶಿಕ್ಷಕರಾದ ಅಜಿತ್ ಕುಮಾರ್ ಹಾಗೂ ಇಂದಿರಾ, ವರ್ಗಾವಣೆಗೊಂಡಿರುವ ಶಿಕ್ಷಕರಾದ ಯಡವಾರೆ ಶಾಲೆಯ ವೈ.ಸಿ.ಕುಮಾರ್, ಕಿರಗಂದೂರು ಶಾಲೆಯ ಕೆಂಪರಾಜು, ಬೇಳೂರು ಶಾಲೆಯ ಸುಜಾತಾ ಅವರನ್ನು ಸನ್ಮಾನಿಸಿ, ಬೀಳ್ಕೊಡಲಾಯಿತು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಕೆ.ಬಸವರಾಜು, ತಾಲೂಕು ಪ್ರಾಥಮಿಕ ಶಾಲೆ ಸಹಶಿಕ್ಷಕರ ಸಂಘದ ಕಾರ್ಯದರ್ಶಿ ರಮೇಶ್, ತಾಲೂಕು ಸರ್ಕಾರಿ ನೌಕರರ ಸಂಘದ ನಿರ್ದೆಶಕ ಯಶವಂತ ಕುಮಾರ್, ಕಾಜೂರು ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಸರಳಾ ಕುಮಾರಿ, ಬೇಳೂರು ಶಾಲೆ ಮುಖ್ಯ ಶಿಕ್ಷಕಿ ಎಸ್ತೆಲಾ ಡಿಸಿಲ್ವಾ ಇದ್ದರು. ಸಿಆರ್‌ಪಿ ಗಿರೀಶ್ ಕಾರ್ಯಕ್ರಮ ನಿರ್ವಹಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net