ಮಕ್ಕಳ ಬೆಳವಣಿಗೆಗೆ ಕಲಿಕಾ ಹಬ್ಬ ಸಹಕಾರಿ

ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ  ಕ್ಲಸ್ಟರ್ನ ಕಲಿಕಾ ಹಬ್ಬ ಆಯೋಜಿಸಲಾಗಿತ್ತು. ವನಜಾಕ್ಷಿ ರೇಣುಕೇಶ್, ಬಿಆರ್‌ಪಿ ಮಂಜುಳಾ ಚಿತ್ರಾಪುರ, ಕೆಟೋಳಿರ ರಾಜ ಗಣಪತಿ, ಕಕ್ಕಬೆ ಸಿಆರ್‌ಪಿ ಕಲ್ಪನಾ, ಶಿಕ್ಷಕರು, ಸಿಬ್ಬಂದಿ, ಹಾಗೂ ಪಾಲಕರು ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ವನಜಾಕ್ಷಿ ರೇಣುಕೇಶ್ ಹೇಳಿಕೆ
ನಾಪೋಕ್ಲು: ಶಾಲಾ ಮಕ್ಕಳಿಗೆ ಪೂರಕ ಶಿಕ್ಷಣ ನೀಡುವ ಸಲುವಾಗಿ 1 ರಿಂದ 5ನೇ ತರಗತಿ ಮಕ್ಕಳಿಗಾಗಿ ಶಿಕ್ಷಣ ಇಲಾಖೆ ಕಲಿಕಾ ಹಬ್ಬ ಆಯೋಜಿಸುತ್ತಿದೆ. ಇದರ ಸದುಪಯೋಗವನ್ನು ಮಕ್ಕಳು ಪಡೆಯಬೇಕು ಎಂದು ನಾಪೋಕ್ಲು ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಹೇಳಿದರು.
ಕರ್ನಾಟಕ ಪಬ್ಲಿಕ್ (ಕೆಪಿಎಸ್) ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ನಾಪೋಕ್ಲು ಕ್ಲಸ್ಟರ್ ಕಲಿಕಾ ಹಬ್ಬವನ್ನು ಉದ್ಘಾಟಿಸಿ ಮಾತನಾಡಿದರು. ಎಫ್‌ಎಲ್‌ಎನ್ ಚಟುವಟಿಕೆಗಳ ಬಲವರ್ಧನೆಗೆ ಕಲಿಕಾ ಹಬ್ಬ ಸಹಕಾರಿಯಾಗಿದೆ. ಜತೆಗೆ ಮಕ್ಕಳಲ್ಲಿ ಕಲಿಕೆಗೆ ಪ್ರೇರೇಪಿಸುತ್ತದೆ. ಮಕ್ಕಳ ಕಲಿಕೆಯ ಒತ್ತಡವನ್ನು ಕಡಿಮೆಗೊಳಿಸಲು ಹಾಗೂ ಎಫ್‌ಎಲ್‌ಎನ್‌ನಲ್ಲಿ ಮಕ್ಕಳು ಸಾಧಿಸಿರುವ ಕಲಿಕಾ ಫಲಗಳನ್ನು ತಿಳಿಯಲು ಇದು ಉತ್ತಮ ವೇದಿಕೆಯಾಗಿದೆ ಎಂದರು.
ಬಿಆರ್‌ಪಿ ಮಂಜುಳಾ ಚಿತ್ರಾಪುರ, ಕರ್ನಾಟಕ ಪಬ್ಲಿಕ್ ಶಾಲೆಯ ಅಭಿವೃದ್ಧಿ ಸಮಿತಿಯ ಸದಸ್ಯ ಕೆಟೋಳಿರ ರಾಜ ಗಣಪತಿ, ಕಕ್ಕಬೆ ಸಿಆರ್‌ಪಿ ಕಲ್ಪನಾ, ಶಿಕ್ಷಕರು, ಸಿಬ್ಬಂದಿ, ಹಾಗೂ ಪಾಲಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net