ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಅತ್ಯಗತ್ಯ

ಸಿದ್ದಾಪುರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಇತೀಚೆಗೆ ಶಾಲಾ ಬ್ಯಾಗ್ ವಿತರಣೆ ಮಾಡಲಾಯಿತು.
ಸಿದ್ದಾಪುರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಇತೀಚೆಗೆ ಶಾಲಾ ಬ್ಯಾಗ್ ವಿತರಣೆ ಮಾಡಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೆಂಕಟೇಶ್ ಅಭಿಮತ
ಸಿದ್ದಾಪುರ: ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಅಗತ್ಯವಾಗಿ ಬೇಕಾಗಿದ್ದು, 18 ವರ್ಷದೊಳಗಿನ ವಿದ್ಯಾರ್ಥಿಗಳು ವಾಹನ ಚಲಾಯಿಸಬಾರದು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೆಂಕಟೇಶ್ ತಿಳಿಸಿದರು.
ಇಲ್ಲಿನ ಪ್ರೌಢಶಾಲೆಯ ನೂತನ ಸಭಾಂಗಣದಲ್ಲಿ ಇತೀಚೆಗೆ ಆಯೋಜಿಸಿದ್ದ ವಿದ್ಯಾರ್ಥಿ ಸಂಸತ್ ಪದಗ್ರಹಣ, ಕಾನೂನು ಅರಿವು ಕಾರ್ಯಕ್ರಮ, ಶಾಲಾ ಬ್ಯಾಗ್ ಹಾಗೂ ಸಮವಸ್ತ್ರ ಉಚಿತ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪೋಕ್ಸೋ ಕಾಯ್ದೆ, ಬಾಲಕಾರ್ಮಿಕ ಪದ್ಧತಿ ಹಾಗೂ ಮಕ್ಕಳ ಹಕ್ಕುಗಳ ಬಗ್ಗೆ ವಿದ್ಯಾರ್ಥಿಗಳು ಅರಿವು ಹೊಂದುವಂತಾಗಬೇಕು ಎಂದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಸಂತ ಅನ್ನಮ್ಮ ಶಾಲೆಯ ಆಡಳಿತಾಧಿಕಾರಿ ಹಾಗೂ ಪ್ರಾಂಶುಪಾಲೆ ಸಿಸ್ಟರ್ ಮಾರ್ಜರಿ, ವಿದ್ಯಾರ್ಥಿಗಳಿಗೆ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿದರು. ಜತೆಗೆ ವೈಯಕ್ತಿಕ ಆರೋಗ್ಯ, ಸ್ವಚ್ಛತೆ ಮತ್ತು ಉತ್ತಮ ಜೀವನಶೈಲಿಯ ಮಹತ್ವವನ್ನು ವಿವರಿಸಿದರು.
ಅಧ್ಯಕ್ಷೀಯ ಭಾಷಣ ಮಾಡಿದ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಪಿ.ಸಿ.ಅಚ್ಚಯ್ಯ, ವಿದ್ಯಾರ್ಥಿಗಳು ಶಿಸ್ತು, ಸಂಸ್ಕಾರ ಮತ್ತು ಕಾನೂನು ಅರಿವಿನೊಂದಿಗೆ ಉತ್ತಮ ಪ್ರಜೆಗಳಾಗಿ ಬೆಳೆಯಬೇಕು ಎಂದು ಸಲಹೆ ನೀಡಿದರಲ್ಲದೆ, ಶಾಲೆಯ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸಾಧನೆಗಳನ್ನು ವಿವರಿಸಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಹಾಗೂ ಸಮವಸ್ತ್ರಗಳನ್ನು ಉಚಿತವಾಗಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಪಿ.ಸಿ.ಕುಶಲಪ್ಪ, ಉಪಾಧ್ಯಕ್ಷ ಪಿ.ಎಂ.ರಾಜಕುಮಾರ, ನಿರ್ದೇಶಕ ಎ.ಸಿ.ಸುಬ್ಬಯ್ಯ, ಮುಖ್ಯಶಿಕ್ಷಕ ಡಿ.ಬಾಬು ನಾಯಕ್, ಸಮಾಜ ವಿಜ್ಞಾನ ಶಿಕ್ಷಕ ಕೆ.ಎಂ.ರಾಜಕುಮಾರ, ದೈಹಿಕ ಶಿಕ್ಷಣ ಶಿಕ್ಷಕ ಅಶೋಕ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net