ಸಿದ್ದಾಪುರ ಸಮೀಪ ಚಿರತೆಗಳ ಸಂಚಾರ

Leaopard
Leaopard
Published on
ಸಿದ್ದಾಪುರ: ಇಲ್ಲಿಗೆ ಸಮೀಪದ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲಳ ಗ್ರಾಮದ ಅಚ್ಚುತ್ತ ಎಸ್ಟೇಟ್ ತೋಟದಲ್ಲಿ ಎರಡು ಚಿರತೆಗಳು ಸಂಚರಿಸುತ್ತಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಎಸ್ಟೇಟ್ ಪ್ರದೇಶದಲ್ಲಿ ಅಳವಡಿಸಲಾಗಿರುವ ಸಿಸಿ ಕ್ಯಾಮರಾದಲ್ಲಿ ಚಿರತೆಯೊಂದು ಹಾದು ಹೋಗುತ್ತಿರುವ ದೃಶ್ಯ ಶುಕ್ರವಾರ ಬೆಳಗ್ಗೆ ಸೆರೆ ಸಿಕ್ಕಿದೆ. ಮುಂಜಾನೆ ವೇಳೆಯಲ್ಲಿ ದಾಖಲಾಗಿರುವ ಈ ದೃಶ್ಯದಲ್ಲಿ ಚಿರತೆ ತೋಟದ ರಸ್ತೆಯ ಮೂಲಕ ನಿಧಾನವಾಗಿ ಸಾಗುತ್ತಿರುವುದು ಕಂಡುಬಂದಿದೆ.
ಸ್ಥಳೀಯರ ಮಾಹಿತಿ ಪ್ರಕಾರ, ಕಳೆದ ಕೆಲವು ದಿನಗಳಿಂದ ಎಸ್ಟೇಟ್ ಸುತ್ತಮುತ್ತ ಎರಡು ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು, ಕಾರ್ಮಿಕರು ಹಾಗೂ ನಿವಾಸಿಗಳು ಎಚ್ಚರಿಕೆಯಿಂದ ಸಂಚರಿಸುವಂತಾಗಿದೆ. ಚಿರತೆಗಳ ನಿರಂತರ ಸಂಚಾರದಿಂದ ಸಾಕುಪ್ರಾಣಿಗಳ ಮೇಲೆಯೂ ಅಪಾಯ ಉಂಟಾಗುವ ಭೀತಿ ವ್ಯಕ್ತವಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಚಿರತೆಗಳ ಚಲನವಲನದ ಮೇಲೆ ನಿಗಾ ವಹಿಸುವಂತೆ ಸ್ಥಳೀಯರಿಗೆ ಸೂಚನೆ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net