ದುಂಡಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಗ್ರಂಥಾಲಯ ಸಪ್ತಾಹ
ಶನಿವಾರಸಂತೆ: ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಗ್ರಂಥಾಲಯ ಸಪ್ತಾಹ ಹಮ್ಮಿಕೊಳ್ಳಲಾಯಿತು.
ಗ್ರಾ. ಪಂ. ಅಧ್ಯಕ್ಷೆ ಭವಾನಿ ಗುರು ಪುಸ್ತಕಗಳನ್ನು ಪ್ರದರ್ಶಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪುಸ್ತಕಗಳನ್ನು ಓದುವುದರಿಂದ ವಿದ್ಯಾರ್ಥಿಗಳು ಮತ್ತು ಓದುಗರಲ್ಲಿ ಜ್ಞಾನದ ಮಟ್ಟ ವೃದ್ಧಿಯಾಗುತ್ತದೆ. ಪ್ರತಿಯೊಬ್ಬರು ಪುಸ್ತಕಗಳನ್ನು ಓದುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು. ವಿಶೇಷವಾಗಿ ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವುದರಿಂದ ಹಲವು ವಿಷಯಗಳನ್ನು ತಿಳಿದುಕೊಳ್ಳಬಹುದಾಗಿದ್ದು ಸಾಮಾನ್ಯ ಜ್ಞಾನದ ಮಟ್ಟ ಸುಧಾರಿಸುತ್ತದೆ ಎಂದು ಹೇಳಿದರು.
ಗ್ರಂಥಾಲಯದ ಮೇಲ್ವಿಚಾರಕಿ ಎಸ್. ಪಿ. ದಿವ್ಯಾ ಮಾತನಾಡಿ, ಗ್ರಂಥಾಲಯಗಳಲ್ಲಿ ಪಂಚಾಯತ್ ರಾಜ್ ಇಲಾಖೆ ಮೂಲಕ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು, ಈ ಮೂಲಕ ವಿದ್ಯಾರ್ಥಿಗಳು ಮತ್ತು ಓದುಗರಲ್ಲಿ ಜ್ಞಾನದ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.