ಸಿಎಂಸಿಎ ಸಂಸ್ಥೆಯ ಕಾರ್ಯಕಾರಿ ನಿರ್ದೇಶಕಿ ಸುಮನ್ ಮ್ಯಾಥ್ಯೂ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವಿಮರ್ಶಾತ್ಮಕ ಚಿಂತನೆ, ಸಮಾನತೆ, ಲಿಂಗ ಸಮಾನತೆ, ಅನುಭೂತಿ ಹಾಗೂ ನಾಗರಿಕ ಮೌಲ್ಯಗಳನ್ನು ಬೆಳೆಸಲು ನಮ್ಮ ಕಾರ್ಯಕ್ರಮಗಳು ಸಹಕಾರಿಯಾಗಿವೆ. ಜತೆಗೆ ಜೀವನ ಕೌಶಲ, ನಾಯಕತ್ವ, ಭಾವನಾತ್ಮಕ ಬುದ್ಧಿಮತ್ತೆ ಮತ್ತು ನಾಗರಿಕ ಭಾಗವಹಿಸುವಿಕೆಗೆ ಉತ್ತೇಜನ ನೀಡಲಾಗುತ್ತಿದೆ ಎಂದು ತಿಳಿಸಿದರು.