ಬರಹಗಾರರನ್ನು ಪ್ರೋತ್ಸಾಹಿಸುವ ಕಾರ್ಯವಾಗಲಿ

 ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಡಾ. ಕೆ.ಬಿ. ಸೂರ್ಯಕುಮಾರ್ ಅವರಿಗೆ ವೈದ್ಯ ಕಂಡ ವಿಸ್ಮಯ ಕೃತಿಗಾಗಿ ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬಾಲಸುಬ್ರಹ್ಮಣ್ಯ ಕಂಜರ್ಪಣೆ, ಕೇಶವ ಕಾಮತ್, ಟಿ.ಪಿ. ರಮೇಶ್, ಜಿ. ರಾಜೇಂದ್ರ, ಹೆಚ್.ಟಿ. ಅನಿಲ್ ಮತ್ತಿತರರು ಇದ್ದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಡಾ. ಕೆ.ಬಿ. ಸೂರ್ಯಕುಮಾರ್ ಅವರಿಗೆ ವೈದ್ಯ ಕಂಡ ವಿಸ್ಮಯ ಕೃತಿಗಾಗಿ ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬಾಲಸುಬ್ರಹ್ಮಣ್ಯ ಕಂಜರ್ಪಣೆ, ಕೇಶವ ಕಾಮತ್, ಟಿ.ಪಿ. ರಮೇಶ್, ಜಿ. ರಾಜೇಂದ್ರ, ಹೆಚ್.ಟಿ. ಅನಿಲ್ ಮತ್ತಿತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • encourage-writers
ಮಡಿಕೇರಿ: ಬರಹಗಾರರನ್ನು ಪ್ರೋತ್ಸಾಹಿಸುವ ಕಾರ್ಯ ಜಿಲ್ಲೆಯಲ್ಲಿ ನಿರಂತರವಾಗಿ ಆಗಬೇಕು. ಆ ಮೂಲಕ ಬರಹಗಾರರು ಎಲ್ಲೆಡೆ ಗುರುತಿಸಿಕೊಳ್ಳುವಂತಾಗಬೇಕು ಎಂದು ಹಿರಿಯ ಸಾಹಿತಿ ಬಾಲಸುಬ್ರಹ್ಮಣ್ಯ ಕಂಜರ್ಪಣೆ ಹೇಳಿದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಗುರುವಾರ ಸಂಜೆ ಇಲ್ಲಿ ಆಯೋಜಿಸಿದ್ದ ಶಕ್ತಿ ಪತ್ರಿಕೆಯ ಸ್ಥಾಪಕ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ. ಕೆ.ಬಿ. ಸೂರ್ಯಕುಮಾರ್ ಅವರಿಗೆ ವೈದ್ಯ ಕಂಡ ವಿಸ್ಮಯ ಕೃತಿಗಾಗಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಕೃತಿ, ಲೇಖನ ರಚನೆಗೆ ವಯಸ್ಸಿನ ನಿರ್ಬಂಧ ಇಲ್ಲ. ಯಾವುದೇ ವಯಸ್ಸಿನಲ್ಲಿಯೂ ಉತ್ತಮ ಲೇಖನ, ಕೃತಿ ರಚನೆ ಸಾಧ್ಯವಿದೆ. ಸೂರ್ಯಕುಮಾರ್ ಅವರೇ ಈ ಮಾತಿಗೆ ಉತ್ತಮ ನಿದರ್ಶನವಾಗಿದ್ದಾರೆ ಎಂದು ಹೇಳಿದರು.
ಪ್ರಶಸ್ತಿ ಸ್ವೀಕರಿಸಿದ ಲೇಖಕ ಡಾ. ಕೆ.ಬಿ. ಸೂರ್ಯಕುಮಾರ್ ಮಾತನಾಡಿ, ಲೇಖಕನಿಗೆ ಓದುಗರೇ ದೇವರು. ಓದುಗರು ಮೆಚ್ಚಿದರೆ ಮಾತ್ರ ಲೇಖಕ ಬೆಳೆಯಲು ಸಾಧ್ಯ ಎಂದು ಹೇಳಿದರು.
ಹಿರಿಯ ಸಾಹಿತಿ ಬಿ.ಎ. ಷಂಶುದ್ದೀನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಡಿ ಅನಿಲ್ ಮಾತನಾಡಿದರು.
ಹಿರಿಯ ಪತ್ರಕರ್ತರಾದ ಜಿ. ರಾಜೇಂದ್ರ, ಬಿ.ಜಿ. ಅನಂತಶಯನ, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ಗೀತಾ ಸೂರ್ಯಕುಮಾರ್, ರಾಜಲಕ್ಷ್ಮೀ ಗೋಪಾಲಕೃಷ್ಣ, ಜಿ. ಚಿದ್ವಿಲಾಸ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ ಪುದಿಯನೆರವನ ರೇವತಿ ರಮೇಶ್, ಖಜಾಂಚಿ ಎಸ್.ಎಸ್. ಸಂಪತ್ ಕುಮಾರ್, ಉಜ್ವಲ್ ರಂಜಿತ್, ಸುಬ್ರಾಯ ಸಂಪಾಜೆ, ಪ್ರತಿಮಾ ಹರೀಶ್ ರೈ, ರಜನಿ ಮತ್ತಿರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net