ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಜ್ಞಾನವಂತರಾಗಲಿ

ಭಾರತ ಮಾತಾ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಗಮನ ಸೆಳೆಯಿತು.
ಭಾರತ ಮಾತಾ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಗಮನ ಸೆಳೆಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಏಕಾಗ್ರತೆ ಮತ್ತು ಪರಿಶ್ರಮ
  • ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದಲ್ಲಿ
  • ಮುಂದಿನ ಜೀವನ ಉಜ್ವಲ
  • ಗ್ಯಾರಂಟಿ ಯೋಜನಾ ಸಮಿತಿಯ ಪಿರಿಯಾಪಟ್ಟಣ ತಾಲೂಕು ಅಧ್ಯಕ್ಷ ನಿತಿನ್ ವೆಂಕಟೇಶ್
ಕುಶಾಲನಗರ: ಏಕಾಗ್ರತೆ ಮತ್ತು ಪರಿಶ್ರಮದಿಂದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದಲ್ಲಿ ಮುಂದಿನ ಜೀವನ ಉಜ್ವಲವಾಗಿರುತ್ತದೆ ಎಂದು ಗ್ಯಾರಂಟಿ ಯೋಜನಾ ಸಮಿತಿಯ ಪಿರಿಯಾಪಟ್ಟಣ ತಾಲೂಕು ಅಧ್ಯಕ್ಷ ನಿತಿನ್ ವೆಂಕಟೇಶ್ ಅಭಿಪ್ರಾಯಪಟ್ಟರು.
ಕೊಪ್ಪದ ಭಾರತ್ ಮಾತಾ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜ್ಞಾನ ಮತ್ತು ವಿದ್ಯೆ ಜಗತ್ತನ್ನು ಆಳುತ್ತದೆ. ಭಾರತದಲ್ಲಿ ಶಿಕ್ಷಣಕ್ಕಿರುವ ಮಹತ್ವ ಬೇರೆ ಯಾವ ಸಂಪತ್ತಿಗೂ ಇಲ್ಲ ಎಂದರು.
ಕೂಡಿಗೆಯ ಸೈನಿಕ ಶಾಲೆ ಪ್ರಾಂಶುಪಾಲ ಅಮರ್ಜಿತ್ ಸಿಂಗ್ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಹೆಚ್ಚು ಜ್ಞಾನವಂತರಾಗುವ ಮೂಲಕ ಸಮರ್ಥರಾಗಬೇಕು ಎಂದರು.
ಪಿರಿಯಾಪಟ್ಟಣ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಪ್ರಸನ್ನ, ಪಿರಿಯಾಪಟ್ಟಣ ವೃತ್ತ ನಿರೀಕ್ಷಕ ಬಿ.ಆರ್.ಪ್ರದೀಪ್‌ಕುಮಾರ್, ಬೈಲುಕುಪ್ಪೆ ಠಾಣೆಯ ವೃತ್ತ ನಿರೀಕ್ಷಕ ಎಂ.ಕೆ ದೀಪಕ್, ವಿದ್ಯಾಸಂಸ್ಥೆಯ ಪ್ರಾಂಶುಪಾಲ ಫ್ಯಾಸಿಬಿಚನ್, ಬೈಲುಕುಪ್ಪೆ ಬೌದ್ಧ ಸೇವಾ ಸಮಿತಿ ಅಧ್ಯಕ್ಷ ಕರ್ಮರಿನ್ ಪೂಂಚೆ, ಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ, ಸಿಆರ್‌ಪಿ ಮುಬೀನಾ ವೇದಿಕೆಯಲ್ಲಿದ್ದರು.
ವೇದಿಕೆ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಆರಂಭದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಸಾಮೂಹಿಕ ಸ್ವಾಗತ ನೃತ್ಯ ಪ್ರದರ್ಶನ ನಡೆಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net