ಕಲಾವಿದರ ಪ್ರತಿಭೆ ಅನಾವರಣಕ್ಕೆ ಗಣೇಶೋತ್ಸವ ವೇದಿಕೆಯಾಗಲಿ

ಗೋಣಿಕೊಪ್ಪಲು ಉಮಾಮಹೇಶ್ವರಿ ಬಡಾವಣೆಯ ಪ್ರಸನ್ನ ಗಣಪತಿ ಸೇವಾ ಸಂಘದ ವತಿಯಿಂದ ಆಯೋಜಿಸಿದ್ದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮವನ್ನು ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಕಾರಿ ತಿಮ್ಮಯ್ಯ ಉದ್ಘಾಟಿಸಿದರು. ಬಿ.ಎನ್.ಪ್ರಕಾಶ್, ಅಮೃತ್ ರಾಜ್, ಸೋಮಯ್ಯ ಮತ್ತಿತರರು ಇದ್ದರು.
ಗೋಣಿಕೊಪ್ಪಲು ಉಮಾಮಹೇಶ್ವರಿ ಬಡಾವಣೆಯ ಪ್ರಸನ್ನ ಗಣಪತಿ ಸೇವಾ ಸಂಘದ ವತಿಯಿಂದ ಆಯೋಜಿಸಿದ್ದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮವನ್ನು ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಕಾರಿ ತಿಮ್ಮಯ್ಯ ಉದ್ಘಾಟಿಸಿದರು. ಬಿ.ಎನ್.ಪ್ರಕಾಶ್, ಅಮೃತ್ ರಾಜ್, ಸೋಮಯ್ಯ ಮತ್ತಿತರರು ಇದ್ದರು.
Published on

ಗೋಣಿಕೊಪ್ಪಲು ಗ್ರಾಪಂ ಮಾಜಿ ಸದಸ್ಯ ಬಿ.ಎನ್.ಪ್ರಕಾಶ್ ಅಭಿಮತ

ಗೋಣಿಕೊಪ್ಪಲು: ಗೋಣಿಕೊಪ್ಪಲು ಉಮಾಮಹೇಶ್ವರಿ ಬಡಾವಣೆಯ ಪ್ರಸನ್ನ ಗಣಪತಿ ಸೇವಾ ಸಂಘದ ವತಿಯಿಂದ 15ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಸ್ಥಳೀಯರಿಗೆ ಮಂಗಳವಾರ ಸಾಂಸ್ಕೃತಿಕ ಸಂಜೆ ಏರ್ಪಡಿಸಲಾಗಿತ್ತು.
ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಕಾರಿ ತಿಮ್ಮಯ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಬಿ.ಎನ್.ಪ್ರಕಾಶ್ ಮಾತನಾಡಿ, ಒಗ್ಗಟ್ಟಿನ ಮೂಲಕ ಗಣೇಶೋತ್ಸವ ಆಚರಣೆ ವರ್ಷದಿಂದ ವಷರ್ಕ್ಕೆ ಮುನ್ನಡೆಯುತ್ತಿದೆ. ಆರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ನಡೆಯುತ್ತಿದ್ದ ಉತ್ಸವ, ಇಂದು ಒಂದನೇ ವಿಭಾಗದ ಜನರ ಪಾಲ್ಗೊಳ್ಳುವಿಕೆಯೊಂದಿಗೆ ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಮಟ್ಟಕ್ಕೆ ಬೆಳೆದಿದೆ.
ಪ್ರತಿಯೊಬ್ಬರಲ್ಲೂ ಒಂದಿಲ್ಲೊಂದು ಪ್ರತಿಭೆ ಅಡಗಿರುತ್ತದೆ. ಅಂತಹ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವುದು ಸಮುದಾಯದ ಜವಾಬ್ದಾರಿ. ಗಣೇಶೋತ್ಸವದಂತಹ ಸಾರ್ವಜನಿಕ ಆಚರಣೆಗಳು ಕೇವಲ ಧಾರ್ಮಿಕ ಕಾರ್ಯಕ್ರಮಗಳಿಗೆ ಸೀಮಿತವಾಗದೆ, ಮಕ್ಕಳ, ಯುವಕರ ಹಾಗೂ ಸ್ಥಳೀಯ ಕಲಾವಿದರ ಪ್ರತಿಭೆ ಅನಾವರಣಕ್ಕೆ ವೇದಿಕೆಯಾಗಬೇಕು. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಅಡಗಿರುವ ಪ್ರತಿಭೆಗಳನ್ನು ಮುನ್ನೆಲೆಗೆ ತರಬೇಕು ಎಂದು ಹೇಳಿದರು.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರತಿಭೆಗಳ ಕಲಾ ಪ್ರದರ್ಶನ ಗಮನ ಸೆಳೆಯಿತು. ಕಾರ್ಯಕ್ರಮವು ಬಡಾವಣೆಯ ಜನರನ್ನು ಒಂದೆಡೆ ಸೇರಿಸುವುದರ ಜತೆಗೆ, ಪರಸ್ಪರ ಬಾಂಧವ್ಯ ಮತ್ತು ಒಗ್ಗಟ್ಟಿನ ಸಂದೇಶವನ್ನೂ ಸಾರಿತು.
ಉದ್ಯಮಿ ಅಮೃತ್ ರಾಜ್, ಕಾಪ್ಸ್ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ಸೋಮಯ್ಯ, ಪತ್ರಕರ್ತ ವಿ.ವಿ.ಅರುಣ್‌ಕುಮಾರ್, ಸಂಘದ ಅಧ್ಯಕ್ಷ ಜಗದೀಶ್ ಜೋಡುಬೀಟಿ, ಉಪಾಧ್ಯಕ್ಷ ಅನಿಲ್, ಕಾರ್ಯದರ್ಶಿ ರಾಘವೇಂದ್ರ, ಖಜಾಂಚಿ ಅನ್ವಿತ್ ಸೌಮ್ಯಾ, ಚೈತ್ರಾ, ಆಶಾ, ಪದಾಕಾರಿಗಳಾದ ಭರತ್, ಲೀನಾ ರಾಘವೇಂದ್ರ, ಮುರುಳಿ, ಮುಕೇಶ್, ಕೌಶಿಕ್, ಪ್ರಿಯಾ, ಸೌಜನ್ಯಾ, ಅನ್ವಿತಾ, ಪ್ರಜ್ವಲ್, ಅಜಿತಾ, ನವೀನ್, ಪ್ರಸನ್ನ ಯುವಕ ಸಂಘದ ಉಪಾಧ್ಯಕ್ಷ ದಿಲೀಪ್ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net