ಮುಂದಿನ ಪೀಳಿಗೆಗೆ ಮಣ್ಣು, ನೀರು ಹಸ್ತಾಂತರವಾಗಲಿ

ಕೂಡಿಗೆಯ ಕೃಷಿ ಫಾರ್ಮ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೆ.ಜಿ.ಪ್ರೇಮಾ, ಪಿ.ಬಿ.ಬೋಪಣ್ಣ, ವಿ.ಎಂ.ಧನಂಜಯ, ಪಿ.ಎಂ. ವೇಣುಕುಮಾರ್, ಕೆ.ಬಾಡಗದ ಬೋಪಣ್ಣ ಅವರನ್ನು ಸನ್ಮಾನಿಸಲಾಯಿತು.
ಕೂಡಿಗೆಯ ಕೃಷಿ ಫಾರ್ಮ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೆ.ಜಿ.ಪ್ರೇಮಾ, ಪಿ.ಬಿ.ಬೋಪಣ್ಣ, ವಿ.ಎಂ.ಧನಂಜಯ, ಪಿ.ಎಂ. ವೇಣುಕುಮಾರ್, ಕೆ.ಬಾಡಗದ ಬೋಪಣ್ಣ ಅವರನ್ನು ಸನ್ಮಾನಿಸಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಕೊಡಗು ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಚಂದ್ರಶೇಖರ್
  • ಚೌಧರಿ ಚರಣ್ ಸಿಂಗ್ ಪ್ರಧಾನಿಯಾಗಿದ್ದ ವೇಳೆ
ಕುಶಾಲನಗರ: ಚೌಧರಿ ಚರಣ್ ಸಿಂಗ್ ಪ್ರಧಾನಿಯಾಗಿದ್ದ ವೇಳೆ ರೈತರ ಕಲ್ಯಾಣಕ್ಕಾಗಿ ಜಾರಿಗೊಳಿಸಿದ ಕಲ್ಯಾಣ ಕಾರ್ಯಕ್ರಮಗಳ ಸ್ಮರಣೆಗಾಗಿ ಕೂಡಿಗೆಯ ಕೃಷಿ ಫಾರ್ಮ್‌ನಲ್ಲಿ ರೈತ ದಿನಾಚರಣೆ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ಕೊಡಗು ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಚಂದ್ರಶೇಖರ್, ಮಣ್ಣು ಹಾಗೂ ನೀರನ್ನು ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗೆ ಹಸ್ತಾಂತರ ಮಾಡಬೇಕಿದೆ. ಇತ್ತೀಚಿನ ದಿನಗಳಲ್ಲಿ ರೈತರು ಬೆಳೆಯುವ ಬೆಳೆಗಳಿಗೆ ಕೀಟ ಬಾಧೆ ಕಾಡುತ್ತಿದ್ದು, ಅದರ ಹತೋಟಿಗೆ ಕೃಷಿ ವಿಜ್ಞಾನಿಗಳು ನೀಡುವ ಸಲಹೆಗಳನ್ನು ರೈತರು ಪಾಲಿಸಬೇಕಿದೆ ಎಂದರು.
ಪ್ರಧಾನ ಮಂತ್ರಿ ಸಣ್ಣ ಆಹಾರ ಸಂಸ್ಕರಣೆ ಹಾಗೂ ಉದ್ಯಮಗಳ ಯೋಜನೆಯಡಿ ಸಿಗುವ ಸವಲತ್ತುಗಳನ್ನು ರೈತರಿಗೆ ಒದಗಿಸಲಾಗುತ್ತಿದೆ. ಈಗಾಗಲೇ 7.50 ಕೋಟಿ ರೂ.ಗಳ ಸಹಾಯ ಧನದಲ್ಲಿ ಕೊಡಗಿನಲ್ಲಿ 107 ಕೃಷಿಕರು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ. ಮಾತ್ರವಲ್ಲದೆ ಬ್ಯಾಂಕ್‌ಗಳಲ್ಲಿ ಸಾಲ ಸೌಲಭ್ಯ, ಕಾಫಿ, ಜೇನು, ಮೀನು, ಚಪಾತಿ ಸಂಸ್ಕರಣೆ, ಎಣ್ಣೆಯ ಗಾಣಗಳು ಸೇರಿದಂತೆ ವಿವಿಧ ಆಹಾರಗಳ ಸಂಸ್ಕರಣೆಯತ್ತ ರೈತರು ತೊಡಗಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ಇಲಾಖೆಯಲ್ಲಿ ಯಾವೆಲ್ಲ ಯೋಜನೆಗಳಿವೆ, ಎಷ್ಟು ಸಹಾಯ ಧನ ದೊರಕಲಿದೆ ಎಂಬುದರ ಕುರಿತು ಕೃಷಿ ಇಲಾಖೆ ಉಪ ನಿರ್ದೇಶಕ ಸೋಮಶೇಖರ್ ಮಾಹಿತಿ ನೀಡಿದರು. ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ ನಾಯಕ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಬಿ.ಭಾರತೀಶ್, ಹಾಸನ ಹಾಲು ಒಕ್ಕೂಟದ ಕೊಡಗು ನಿರ್ದೇಶಕ ಕೆ.ಕೆ. ಹೇಮಂತಕುಮಾರ್ ಮಾತನಾಡಿದರು.
ಇದೇ ಸಂದರ್ಭ ಕೃಷಿ ಪಂಡಿತ ಪ್ರಶಸ್ತಿ ವಿಜೇತ ರೈತರಾದ ಮರಗೋಡಿನ ಕೆ.ಜಿ.ಪ್ರೇಮಾ, ಉದಯೋನ್ಮುಖ ಕೃಷಿ ಪ್ರಶಸ್ತಿ ಪಡೆದ ಹಾಲಗುಂದ ಪಿ.ಬಿ.ಬೋಪಣ್ಣ, ಕಿರಗೂರು ರೇವತಿ, ರಾಜ್ಯ ಮಟ್ಟದ ಕೃಷಿ ಪ್ರಶಸ್ತಿ ವಿಜೇತ ರೈತರಾದ ಕಾಂತೂರಿನ ವಿ.ಎಂ.ಧನಂಜಯ, ಕಿಗ್ಗಾಲು ಪಿ.ಎಂ. ವೇಣುಕುಮಾರ್, ಕೆ.ಬಾಡಗದ ಬೋಪಣ್ಣ, ನಾಲ್ಲೇರಿಯ ಅಲ್ಲೂಮಾಡ ಲೀಲಾ ಅವರನ್ನು ಸನ್ಮಾನಿಸಲಾಯಿತು.
ಚೆಟ್ಟಳ್ಳಿ ಕೃಷಿ ಸಂಶೋಧನಾ ಸಂಸ್ಥೆಯ ಕೃಷಿ ವಿಜ್ಞಾನಿಗಳಾದ ಡಾ.ರಾಣಿ, ಡಾ.ರಾಜೇಂದ್ರನ್ ರೈತರಿಗೆ ಉಪಯುಕ್ತ ಮಾಹಿತಿ ನೀಡಿದರು.ಉಪ ಯೋಜನಾ ನಿರ್ದೇಶಕಿ ಮೈತ್ರಿ, ಸಹಾಯಕ ಕೃಷಿ ನಿರ್ದೇಶಕರಾದ ಪರಮೇಶ್, ನಾಗೇಂದ್ರ, ಶಿವಮೂರ್ತಿ, ವೀರಣ್ಣ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net