ಯುವ ಸಮೂಹ ಉಜ್ವಲ ಭವಿಷ್ಯದತ್ತ ಚಿತ್ತ ಹರಿಸಲಿ

ಕೊಡ್ಲಿಪೇಟೆ ವಿದ್ಯಾಸಂಸ್ಥೆಯಲ್ಲಿ ಜನಜಾಗೃತಿ ವೇದಿಕೆ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತು ವಿರೋಧಿ ದಿನಾಚಣೆ ಜನಜಾಗೃತಿ ಕಾರ್ಯಕ್ರಮವನ್ನು ಚಂದ್ರಶೇಖರ್ ಅಡ್ಮಿನಿ ಉದ್ಘಾಟಿಸಿದರು. ಭಗವಾನ್ ಗೌಡ, ಮಹಮ್ಮದ್ ಹನೀಫ್, ಮುನಾವರ್ ಪಾಷ, ಮಹೇಶ್ ಇತರರು ಇದ್ದರು.
ಕೊಡ್ಲಿಪೇಟೆ ವಿದ್ಯಾಸಂಸ್ಥೆಯಲ್ಲಿ ಜನಜಾಗೃತಿ ವೇದಿಕೆ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತು ವಿರೋಧಿ ದಿನಾಚಣೆ ಜನಜಾಗೃತಿ ಕಾರ್ಯಕ್ರಮವನ್ನು ಚಂದ್ರಶೇಖರ್ ಅಡ್ಮಿನಿ ಉದ್ಘಾಟಿಸಿದರು. ಭಗವಾನ್ ಗೌಡ, ಮಹಮ್ಮದ್ ಹನೀಫ್, ಮುನಾವರ್ ಪಾಷ, ಮಹೇಶ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕೊಡ್ಲಿಪೇಟೆ ಪ್ರೌಢಶಾಲೆಯ ಶಿಕ್ಷಕ ಚಂದ್ರಶೇಖರ್ ಅಡ್ಮಿನಿ ಕಿವಿಮಾತು
  • ಮಾದಕ ವಸ್ತುಗಳ ವಿರೋಧಿ ದಿನಾಚರಣೆ
ಶನಿವಾರಸಂತೆ: ದುಶ್ಚಟಗಳಿಂದ ದೂರವಿದ್ದು ಯುವ ಸಮೂಹ ಆರೋಗ್ಯದ ಕಡೆ ಹೆಚ್ಚು ಗಮನಹರಿಸಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕೊಡ್ಲಿಪೇಟೆ ಪ್ರೌಢಶಾಲೆ ಶಿಕ್ಷಕ ಚಂದ್ರಶೇಖರ್ ಅಡ್ಮಿನಿ ಕಿವಿಮಾತು ಹೇಳಿದರು.
ಕೊಡ್ಲಿಪೇಟೆ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜನ ಜಾಗೃತಿ ವೇದಿಕೆ ಸಹಯೋಗದಲ್ಲಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಅಂಗವಾಗಿ ಬುಧವಾರ ಆಯೋಜಿಸಿದ್ದ ಜನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿ ದಿಸೆಯಲ್ಲಿ ಸಮಾಜಘಾತುಕ ಚಟುವಟಿಕೆ, ಮಾದಕ ವಸ್ತುಗಳ ಸೇವನೆ ಮುಂತಾದ ದುಶ್ಚಟಗಳಿಂದ ದೂರವಿರಬೇಕು. ಆರೋಗ್ಯಕರ ಜೀವನ ರೂಪಿಸಿಕೊಳ್ಳುವ ಜತೆಗೆ ಉತ್ತಮ ಸಮಾಜ ರೂಪಿಸುವ ಜವಾಬ್ದಾರಿ ಯುವ ಜನಾಂಗದ ಮೇಲಿದೆ ಎಂದರು.
ಜನ ಜಾಗೃತಿ ವೇದಿಕೆಯ ಜಿಲ್ಲಾ ಸಮಿತಿ ಸದಸ್ಯ ಭಗವಾನ್ ಗೌಡ ಮಾತನಾಡಿ, ಧರ್ಮಸ್ಥಳ ಸಂಸ್ಥೆಯು ಸಾಮಾಜಿಕ ಜಾಗೃತಿ, ಧಾರ್ಮಿಕ ಕಾರ್ಯಗಳ ಜತೆ ಯುವ ಸಮೂಹದವರು ದುಶ್ಚಟಗಳಿಂದ ಮುಕ್ತಗೊಳಿಸುವ ಉದ್ದೇಶದಿಂದ ನಿರಂತರವಾಗಿ ಮಧ್ಯವರ್ಜನ ಶಿಬಿರದ ಮೂಲಕ ಜನ ಜಾಗೃತಿ ಕಾರ್ಯಕ್ರಮ ಆಯೋಜಿಸುತ್ತದೆ ಎಂದರು.
ಬ್ಯಾಡಗೊಟ್ಟ ಗ್ರಾ.ಪಂ ಮಾಜಿ ಅಧ್ಯಕ್ಷ ಮಹಮ್ಮದ್ ಹನೀಫ್ ಮಾತನಾಡಿ, ಮಾದಕ ವಸ್ತುಗಳ ಬಗ್ಗೆ ವಿದ್ಯಾರ್ಥಿ ಜೀವನದಲ್ಲೇ ಅರಿವು ಮೂಡಿಸಬೇಕು. ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾದರೆ ಅವರ ಶೈಕ್ಷಣಿಕ ಜೀವನವೂ ಬಲಿಯಾಗುತ್ತದೆ ಎಂದರು.
ವೇದಿಕೆಯಲ್ಲಿ ಕೊಡ್ಲಿಪೇಟೆ ಉಪ ಠಾಣೆಯ ಸಿಬ್ಬಂದಿ ಮುನಾವರ್ ಪಾಷ, ಗ್ರಾಮಾಭಿವೃದ್ಧಿ ಸಮಿತಿಯ ಮಹೇಶ್, ಕೊಡ್ಲಿಪೇಟೆ ವಲಯದ ಮೇಲ್ವಿಚಾರಕಿ ಶಾಲಿನಿ, ಸೇವಾ ಪ್ರತಿನಿಧಿಗಳಾದ ರಾಣಿ, ಫಾತಿಮಾ, ಸುಮಿತ್ರಾ, ಶಾಲಾ ಶಿಕ್ಷಕ ಸುನಿಲ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net