ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಚೊಟ್ಟೆಪಾರೆ ಆದಿವಾಸಿ ನಿವಾಸಿಗಳಿಗೆ ಭಾನುವಾರ ಕಾನೂನು ಅರಿವು ಹಾಗೂ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಠಾಣಾಧಿಕಾರಿ ಮಂಜುನಾಥ್, ಗ್ರಾಮಸ್ಥರು ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಸಲಹೆ
ಸಿದ್ದಾಪುರ:ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಚೊಟ್ಟೆಪಾರೆ ಆದಿವಾಸಿ ನಿವಾಸಿಗಳಿಗೆ ಭಾನುವಾರ ಕಾನೂನು ಅರಿವು ಹಾಗೂ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಭಾನುವಾರ ಹಾಡಿಯಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಮಾತನಾಡಿ, ಸರ್ಕಾರದಿಂದ ದೊರೆಯುವ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಶಿಕ್ಷಣದ ಮಹತ್ವವನ್ನು ವಿವರಿಸಿ, ಮಕ್ಕಳ ಸುರಕ್ಷತೆಗಾಗಿ ಜಾರಿಯಲ್ಲಿರುವ ಪೋಕ್ಸೋ ಕಾಯ್ದೆಯ ಪ್ರಮುಖ ಅಂಶಗಳನ್ನು ತಿಳಿಸಿದರು.
ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿ, ಕುಟುಂಬ ಹಾಗೂ ಸಮಾಜದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿ ಯುವಕರು ಮಾದಕ ವ್ಯಸನದಿಂದ ದೂರವಿದ್ದು ಉತ್ತಮ ಶಿಕ್ಷಣ ಹಾಗೂ ಉತ್ತಮ ಜೀವನದತ್ತ ಸಾಗುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಹಾಗೂ ಯುವಕರು ಭಾಗವಹಿಸಿ, ಕಾನೂನು ಮತ್ತು ಸಾಮಾಜಿಕ ಜಾಗೃತಿಗೆ ಸಂಬಂಧಿಸಿದ ಮಾಹಿತಿ ಪಡೆದರು.