ನಾವು ಸ್ವಚ್ಛ, ಹಸಿರು, ಸುಂದರ, ಆರೋಗ್ಯವಂತ ಹಾಗೂ ಭವಿಷ್ಯದ ದೃಷ್ಠಿಯಿಂದ ಸುಸ್ಥಿರ ಪರಿಸರ ನಿರ್ಮಾಣಕ್ಕಾಗಿ ಸಂಘಟಿತ ಪ್ರಯತ್ನಪಡಬೇಕು. ನಾವು ನಮ್ಮ ಆಸ್ತಿ- ಪಾಸ್ತಿ, ವೈಯಕ್ತಿಕ ಸ್ವಚ್ಛತೆ ಮತ್ತು ನಮ್ಮ ಸುತ್ತಲಿನ ಪರಿಸರ ಸ್ವಚ್ಛತೆ ಹಾಗೂ ನಮ್ಮ ಮನೆಯ ಬಗ್ಗೆ ಕಾಳಜಿ ವಹಿಸಿದಂತೆಯೇ ನಮ್ಮನ್ನು ರಕ್ಷಿಸುತ್ತಿರುವ ಭೂಮಿಯ ಸಂರಕ್ಷಣೆ ಹಾಗೂ ನೈಸರ್ಗಿಕ ಸಂರಕ್ಷಣೆಗೆ ವಿಶೇಷ ಕಾಳಜಿ ವಹಿಸಬೇಕಿದೆ. ಅರಣ್ಯ, ಪರಿಸರ, ವನ್ಯಜೀವಿಗಳು, ಜೀವಿ ವೈವಿಧ್ಯ ಸಂರಕ್ಷಣೆ ಮತ್ತು ಜಲ ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗೆ ನಾವು ಉತ್ತಮ ಪರಿಸರವನ್ನು ಕೊಡುಗೆಯಾಗಿ ನೀಡಲು ನಾವೆಲ್ಲಾ ಬದ್ಧರಾಗಬೇಕಿದೆ ಎಂದು ಹೇಳಿದರು.