ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನುಕಾರ್ಯಪ್ಪ ಮಾತನಾಡಿ, ಪ್ರಸ್ತುತ ಕಾಲಘಟ್ಟದಲ್ಲಿ ಖಾಯಿಲೆಗಳು ಹೆಚ್ಚಾಗಿವೆ. ನಮ್ಮ ಆಹಾರ ಕ್ರಮಗಳು ಕೂಡ ಆರೋಗ್ಯದ ವಿಚಾರದಲ್ಲಿ ಬಹಳ ಮುಖ್ಯ. ಹಳ್ಳಿಗಳಲ್ಲಿ ದೇಶೀಯ ಆಹಾರ ಸೇವನೆಯಿಂದ ಖಾಯಿಲೆಗಳು ಕಡಿಮೆಯಿದ್ದರೆ ನಗರ ಪ್ರದೇಶಗಳಲ್ಲಿ ಹೆಚ್ಚಾಗಿವೆ. ಆದ್ದರಿಂದ ಆಹಾರ ಕ್ರಮದಲ್ಲಿ ಬದಲಾವಣೆ ಅಗತ್ಯ ಎಂದ ಅವರು, ಖಾಸಗಿ ಆಸ್ಪತ್ರೆಗಳು ಪತ್ರಕರ್ತರಿಗೆ ಚಿಕಿತ್ಸೆಗೆ ಹೆಚ್ಚಿನ ರಿಯಾಯಿತಿ ನೀಡಿದಲ್ಲಿ ಅನುಕೂಲವಾಗಲಿದೆ ಎಂದರು.