ಕುಂದಳ್ಳಿ ಗ್ರಾಮದಲ್ಲಿ ತೆಂಗಿನ ಮರಕ್ಕೆ ಸಿಡಿಲು

ಸೋಮವಾರಪೇಟೆ ತಾಲೂಕಿನ ಕುಂದಳ್ಳಿ ಗ್ರಾಮದಲ್ಲಿರುವ ತೆಂಗಿನ ಮರ.
ಸೋಮವಾರಪೇಟೆ ತಾಲೂಕಿನ ಕುಂದಳ್ಳಿ ಗ್ರಾಮದಲ್ಲಿರುವ ತೆಂಗಿನ ಮರ.
Published on
ಸೋಮವಾರಪೇಟೆ: ತಾಲೂಕಿನ ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಕುಂದಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ಗುಡುಗು-ಸಿಡಿಲು ಸಹಿತ ಮಳೆ ಸುರಿದ ಪರಿಣಾಮ ನಂದೀಶ್ ಅವರ ಮನೆ ಸಮೀಪದ ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ.
ಸಿಡಿಲಿನಿಂದ ತೆಂಗಿನ ಮರಕ್ಕೆ ತಕ್ಷಣವೇ ಬೆಂಕಿ ಹೊತ್ತಿಕೊಂಡು ಕೆಲಕಾಲ ಉರಿಯತೊಡಗಿತು. ಸ್ಥಳೀಯರು ಆತಂಕಗೊಂಡರೂ, ಬಳಿಕ ಮಳೆ ನೀರಿನಿಂದ ಬೆಂಕಿ ನಿಧಾನವಾಗಿ ಶಮನಗೊಂಡಿದೆ. ಘಟನೆಯಲ್ಲಿ ಯಾವುದೇ ತೊಂದರೆ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net