ರೋಟರಿ ಕ್ಲಬ್ ಅಧ್ಯಕ್ಷ ಸಂಪತ್ ಮಾತನಾಡಿ, ಸಮಾಜ ಸೇವೆ ಮತ್ತು ಸಮಾಜಮುಖಿ ಕಾರ್ಯವನ್ನು ಮಾಡುತ್ತಿರುವ ರೋಟರಿ ಸಂಸ್ಥೆ ಸಮಾಜದಲ್ಲಿ ಜನರ ಮನ್ನಣೆಗಳಿಸುತ್ತಿದೆ. ರೋಟರಿ ಸಂಸ್ಥೆಯು ಶಿಕ್ಷಣ, ಆರೋಗ್ಯ, ಪರಿಸರ, ಅರಣ್ಯ ಹಾಗೂ ಸಮಾಜದ ಅಭಿವೃದ್ಧಿಗೆ ಉತ್ತೇಜನ ನೀಡುತ್ತಿದೆ. ಈ ಮೂಲಕ ರೋಟರಿ ಸಂಸ್ಥೆಯ ಸದಸ್ಯರು ಯಾವುದೇ ಫಲಾಪೇಕ್ಷೆ ಇಲ್ಲದೆ ಸಮಾಜದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ ಎಂದ ಅವರು, ಆಲೂರು ಸಿದ್ದಾಪುರ ರೋಟರಿ ಸಂಸ್ಥೆ ಈ ಭಾಗದಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಈ ಪೈಕಿ ಗದ್ದೆಯಲ್ಲಿ ಭತ್ತ ನಾಟಿ ಮಾಡುವ ಕಾರ್ಯಕ್ರಮವೂ ಒಂದಾಗಿದೆ ಎಂದು ಹೇಳಿದರು.