ನುಡಿಜಾತ್ರೆಗೆ ಸಾಹಿತಿ ಜಲಜಾ ಶೇಖರ್ ಅಧ್ಯಕ್ಷೆ

ಸಾಹಿತಿ ಜಲಜಾ ಶೇಖರ್
ಸಾಹಿತಿ ಜಲಜಾ ಶೇಖರ್
Published on

ಪ್ರಮುಖ ಮುಖ್ಯಾಂಶಗಳು

  • 9ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರಾಗಿ ಆಯ್ಕೆ
ಸೋಮವಾರಪೇಟೆ: ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನಿಂದ ಫೆ 9ರಂದು ಐಗೂರು ಗ್ರಾಮದಲ್ಲಿ ನಡೆಸಲು ಉದ್ದೇಶಿಸಿರುವ 9ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸೋಮವಾರಪೇಟೆ ಸಾಹಿತಿ ಜಲಜಾ ಶೇಖರ್ ಆಯ್ಕೆಯಾಗಿದ್ದಾರೆ.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಜಿಲ್ಲಾ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ಆಯೋಜಿಸಿದ್ದ ಸಭೆಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಕೊಡಗು ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹ್ಮದ್, ಗೌರವ ಕೋಶಾಧಿಕಾರಿ ಎಸ್.ಎಸ್.ಸಂಪತ್ ಕುಮಾರ್, ನಿಕಟಪೂರ್ವ ಜಿಲ್ಲಾಧ್ಯಕ್ಷ ಟಿ.ಪಿ ರಮೇಶ್, ನಿರ್ದೇಶಕರಾದ ಸಂಜೀವ ಜೋಶಿ, ಮಡಿಕೇರಿ ತಾಲೂಕು ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಎಸ್.ಡಿ.ವಿಜೇತ್ ಇದ್ದರು.
ಶೈಕ್ಷಣಿಕ, ಸಾಹಿತ್ಯ ಅಲ್ಲದೆ ಸಾಮಾಜಿಕ ಮತ್ತು ಸಹಕಾರ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಅವರು, ಶಿಕ್ಷಕರಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಸುಮಾರು 30 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ಕೆಲಸ ಮಾಡುತ್ತಿದ್ದು, ಇಲ್ಲಿಯವರೆಗೆ ಏಳು ಕೃತಿಗಳನ್ನು ಹೊರತಂದಿದ್ದು ಎಂಟನೆಯ ಕೃತಿ ಸಾಹಿತ್ಯ ಸಮ್ಮೇಳನದಲ್ಲಿ ಬಿಡುಗಡೆಯಾಗಲಿದೆ. ವಿಚಾರದೆಡೆಗೆ, ನೆಲಮುಗಿಲು, ಅಗ್ನಿಕುಂಡ, ಪ್ರತೀಕ್ಷ, ವಿಲೋಕನ ವೈಚಾರಿಕ ಲೇಖನಗಳು, ದೂರ ತೀರ ಯಾನ ಪ್ರವಾಸ ಕಥನ, ಕನ್ನಡಿಯ ಬಿಂಬ ಕೃತಿಗಳನ್ನು ರಚಿಸಿದ್ದಾರೆ.
ಸೋಮವಾರಪೇಟೆ ಅಕ್ಕನ ಬಳಗದ ಅಧ್ಯಕ್ಷರಾಗಿ ಹಲವಾರು ವರ್ಷ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಕೊಡಗು ಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹಲವಾರು ಸಾಹಿತ್ಯ ಸಮ್ಮೇಳನಗಳಲ್ಲಿ ವಿಚಾರ ಮಂಡನೆ, ಕವಿಗೋಷ್ಠಿ ಗಳಲ್ಲಿ ಭಾಗವಹಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net