ಅಧ್ಯಕ್ಷತೆ ವಹಿಸಿದ್ದ ಎಸ್‌ಡಿಎಂಸಿ ಅಧ್ಯಕ್ಷ ಎಂ.ಸಂತೋಷ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ತೆರೆಯಲು ಮುಂದಾಗಿರುವ ಸರ್ಕಾರದ ನಿರ್ಧಾರ ಸಂತೋಷ ತಂದಿದೆ. ಇದರಿಂದ ಹಳ್ಳಿ ಮಕ್ಕಳು ಕನ್ನಡದ ಜತೆಗೆ ಇಂಗ್ಲಿಷ್ ಭಾಷೆಯನ್ನೂ ಕಲಿಯಲು ಸಹಕಾರಿಯಾಗಿದೆ ಎಂದರು. ಎಸ್‌ಡಿಎಂಸಿ ಉಪಾಧ್ಯಕ್ಷೆ ಕೆ.ಆರ್. ಪವಿತ್ರಾ, ಶಿಕ್ಷಕಿಯರಾದ ಕೆ.ಬಿ. ಗೀತಾರಾಣಿ, ಮೇರಿ ಮಾರ್ಗರೇಟ್, ಜಿ. ನಳಿನಿ, ಪೂರ್ವ ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕಿ ಪಿ.ಆರ್. ಶ್ಯಾಮಲಾ, ಅಂಗನವಾಡಿ ಕಾರ್ಯಕರ್ತೆ ಕಲಾವತಿ, ಸಹಾಯಕಿ ಎನ್.ಪಿ. ತ್ರಿಪುರಾ ಇದ್ದರು.