

ಈಗಾಗಲೇ ಬ್ಯಾಂಕುಗಳಲ್ಲಿ ಒನ್ ಟೈಮ್ ಸೆಟಲ್‌ಮೆಂಟ್ ಮೂಲಕ ರಿಯಾಯಿತಿ ದರದಲ್ಲಿ ಸಾಲ ಪಾವತಿಗೆ ಅವಕಾಶ ನೀಡಲಾಗಿತ್ತು. ಆದರೂ ಕೆಲವು ಬೆಳೆಗಾರರು ವೈಯಕ್ತಿಕ ಕಾರಣಗಳಿಂದ ಅವಕಾಶ ವಂಚಿತರಾಗಿದ್ದರು. ಹಾಗಾಗಿ ಮತ್ತೊಮ್ಮೆ, ಕೆನರಾ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕ ಹಾರ್ದಿಕ್ ಸಿಂಗ್ ಅಹ್ವಾಲಿಯ ಅವರನ್ನು ಖುದ್ದಾಗಿ ಭೇಟಿ ಮಾಡಿ ಕಾಫಿ ಬೆಳೆಗಾರರ ಸಮಸ್ಯೆಗಳನ್ನು ಗಮನಕ್ಕೆ ತಂದು, ಒನ್ ಟೈಮ್ ಸೆಟಲ್‌ಮೆಂಟ್‌ಗೆ ಅವಕಾಶ ನೀಡುವಂತೆ ಮನವಿ ಮಾಡಲಾಗಿತ್ತು. ನಮ್ಮ ಮನವಿಗೆ ಸ್ಪಂದಿಸಿದ ಅವರು ಕ್ಯಾನ್ ಅದಾಲತ್‌ಗೆ ಅವಕಾಶ ನೀಡಿದ್ದಾರೆ. ಈ ಅವಕಾಶವನ್ನು ಕಾಫಿ ಬೆಳೆಗಾರರು ಸದುಪಯೋಗ ಪಡಿಸಿಕೊಂಡು ಸಾಲದಿಂದ ಮುಕ್ತರಾಗಬೇಕೆಂದು ವಿನಂತಿ ಮಾಡುತ್ತೇನೆ.
— ಎಂ.ಜೆ. ದಿನೇಶ್, ಅಧ್ಯಕ್ಷ, ಭಾರತೀಯ ಕಾಫಿ ಮಂಡಳಿ