ಲೋಕಾಯುಕ್ತ ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಕಾರ್ಯಚರಣೆಗಿಳಿದು ದಾಖಲೆ, ಕಡತಗಳ ಪರಿಶೀಲನೆ ನಡೆಸಿದರು. ಇದೇ ರೀತಿ ನಗರಸಭೆ ಕಚೇರಿ, ನೋಂದಣಿ ಕಚೇರಿ ವಿರುದ್ಧವೂ ಸಾಕಷ್ಟು ದೂರುಗಳಿದ್ದು ದಿಢೀರ್ ಭೇಟಿ ನೀಡಿ ಪರಿಶೀಲಿಸಲು ಉಪಲೋಕಾಯುಕ್ತರು ನಿರ್ದೇಶನ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದ್ದು ಸದ್ಯದಲ್ಲೇ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸುವ ಸಾಧ್ಯತೆಗಳಿವೆ.