ಕೂಲಿ ಕಾರ್ಮಿಕನ ಮೇಲೆ ಒಂಟಿ ಸಲಗ ದಾಳಿ

ಒಂಟಿ ಸಲಗ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುವಿನ ಆರೋಗ್ಯವನ್ನು ವಲಯ ಅರಣ್ಯಾಧಿಕಾರಿ ಶಿವರಾಮ್ ವಿಚಾರಿಸಿದರು.
ಒಂಟಿ ಸಲಗ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುವಿನ ಆರೋಗ್ಯವನ್ನು ವಲಯ ಅರಣ್ಯಾಧಿಕಾರಿ ಶಿವರಾಮ್ ವಿಚಾರಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಒಂಟಿ ಅಂಗಡಿ ಚಾಮುಂಡಿ ಪೈಸಾರಿ ಬಳಿ ಘಟನೆ
  • ಕೂಲಿ ಕಾರ್ಮಿಕ ಅಭಿಗೆ ಗಂಭೀರ ಗಾಯ
ಸಿದ್ದಾಪುರ : ಅಮ್ಮತ್ತಿ ಸಮೀಪದ ಒಂಟಿ ಅಂಗಡಿ ಚಾಮುಂಡಿ ಪೈಸಾರಿ ಬಳಿ ಒಂಟಿ ಸಲಗದ ದಾಳಿಗೆ ಕೂಲಿ ಕಾರ್ಮಿಕ ಅಭಿ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾರೆ.
ಶುಕ್ರವಾರ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಒಂಟಿ ಸಲಗ ದಾಳಿ ನಡೆಸಿದೆ. ಪರಿಣಾಮ ಕಾರ್ಮಿಕನ ಸೊಂಟದ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಲಯ ಅರಣ್ಯಾಧಿಕಾರಿ ಶಿವರಾಮ್ ಸ್ಥಳ ಪರಿಶೀಲನೆ ನಡೆಸಿ, ಬಳಿಕ ಆಸ್ಪತ್ರೆಗೆ ತೆರಳಿ ಗಾಯಾಳುವಿನ ಆರೋಗ್ಯ ವಿಚಾರಿಸಿದರು.
ಸ್ಥಳದಲ್ಲಿ ಆರ್‌ಆರ್‌ಟಿ ಸಿಬ್ಬಂದಿ ಬೀಡುಬಿಟ್ಟಿದ್ದು, ಸಲಗದ ಚಲನವಲನದ ಮೇಲೆ ನಿಗಾ ವಹಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net