ಇಲ್ಲಿಯ ಪೊಲೀಸ್ ಠಾಣಾ ವ್ಯಾಪ್ತಿಯ ಕುಯ್ಯಠಗೇರಿ ಮೂರ್ನಾಡು ರಸ್ತೆಯ ಬಸ್ ನಿಲ್ದಾಣ ಹತ್ತಿರ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಠಾಣಾಧಿಕಾರಿ ರಾಘವೇಂದ್ರ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಒಬ್ಬ ಆರೋಪಿಯನ್ನು ಬಂಧಿಸಿ, ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.