ದೇವಾಲಯದ ಪ್ರಧಾನ ಅರ್ಚಕ ನಂಜುಂಡೇಶ್ವರ ಅವರ ನೇತೃತ್ವದಲ್ಲಿ ಆಂಜನೇಯ ಸ್ವಾಮಿಗೆ ಬೆಳಗ್ಗೆ ಪಂಚಾಮೃತ ಅಭಿಷೇಕ, ಅರ್ಚನೆ ಸೇವೆ ನಡೆಯಿತು. ಋತ್ವಿಜರಿಂದ ಮಾರುತಿ ಹೋಮ, ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ನೆರವೇರಿತು. ನೂರಾರು ಭಕ್ತರು ಪೂಜೆಯಲ್ಲಿ ಪಾಲ್ಗೊಂಡಿದ್ದರು. ದೇವಾಲಯ ಸಮಿತಿ ಅಧ್ಯಕ್ಷ ಸಿ.ಪಿ. ಗೋಪಾಲ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್.ಎಲ್.ಸೀತಾರಾಂ, ಸಮಿತಿ ಕಾರ್ಯದರ್ಶಿ ನಂದಕುಮಾರ್, ಸದಸ್ಯರಾದ ರಾಘವ, ಸುರೇಶ್, ಹಾಲಪ್ಪ, ಗಣೇಶ್ ಇತರರು ಇದ್ದರು. ನೂರಾರು ಭಕ್ತರು ದೇವರ ದರ್ಶನ ಪಡೆದು ಧನ್ಯತೆ ಮೆರೆದರು. ನಂತರ ಪ್ರಸಾದ ವಿನಿಯೋಗ ನೆರವೇರಿತು.