ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಒಳ್ಳೆಯ ಅಂಕ ಪಡೆಯಲಿ

ವಿರಾಜಪೇಟೆಯ ದೊಡ್ಡಟ್ಟಿ ಚೌಕಿಯಲ್ಲಿರುವ ಆದಿಶಕ್ತಿ ಟುಟೋರಿಯಲ್ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಬೀಳ್ಕೊಡಲಾಯಿತು. ಕರಣ್ ಕುಮಾರ್, ಜಿಶ್ಮ, ಗಗನ್, ಶಮಿನಾ, ಗೀತಾ ಇದ್ದರು.
ವಿರಾಜಪೇಟೆಯ ದೊಡ್ಡಟ್ಟಿ ಚೌಕಿಯಲ್ಲಿರುವ ಆದಿಶಕ್ತಿ ಟುಟೋರಿಯಲ್ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಬೀಳ್ಕೊಡಲಾಯಿತು. ಕರಣ್ ಕುಮಾರ್, ಜಿಶ್ಮ, ಗಗನ್, ಶಮಿನಾ, ಗೀತಾ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಆದಿಶಕ್ತಿ ಸೇವಾ ಟ್ರಸ್ಟ್ ಅಧ್ಯಕ್ಷ ಟಿ.ಎನ್.ಅರುಣ್ ಕುಮಾರ್‌ಶೆಟ್ಟಿ
  • ದೊಡ್ಡಟ್ಟಿ ಚೌಕಿಯಲ್ಲಿರುವ ಆದಿಶಕ್ತಿ ಟುಟೋರಿಯಲ್ನ
ವಿರಾಜಪೇಟೆ: ವಿದ್ಯಾರ್ಥಿಗಳು ಉತ್ತಮವಾಗಿ ಕಲಿತು ಮುಂಬರುವ ಪರೀಕ್ಷೆಗಳಲ್ಲಿ ಒಳ್ಳೆಯ ಅಂಕ ಪಡೆಯುವಂತಾಗಬೇಕು ಎಂದು ಆದಿಶಕ್ತಿ ಸೇವಾ ಟ್ರಸ್ಟ್ ಅಧ್ಯಕ್ಷ ಟಿ.ಎನ್.ಅರುಣ್ ಕುಮಾರ್‌ಶೆಟ್ಟಿ ಹೇಳಿದರು.
ಇಲ್ಲಿನ ದೊಡ್ಡಟ್ಟಿ ಚೌಕಿಯಲ್ಲಿರುವ ಆದಿಶಕ್ತಿ ಟುಟೋರಿಯಲ್ನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ಸಂಸ್ಥೆ ಆರು ವರ್ಷಗಳಿಂದ ಅನೇಕ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಮಾಡುತ್ತಿದೆ. ವಿದ್ಯಾರ್ಥಿಗಳು ಉತ್ತಮವಾಗಿ ಕಲಿತು ಸಂಸ್ಥೆಯ ಹೆಸರನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ಕೆಲಸ ಮಾಡಬೇಕು. ಸಂಸ್ಥೆಯು ಕೇವಲ ಪಾಠ ಪ್ರವಚನಕ್ಕೆ ಮಾತ್ರ ಸೀಮಿತವಾಗದೆ ಇತರ ಚಟುವಟಿಕೆಗಳನ್ನೂ ಹಮ್ಮಿಕೊಳ್ಳುವ ಮೂಲಕ ಮಕ್ಕಳಲ್ಲಿ ಸೃಜನಶೀಲತೆಯನ್ನು ಹೆಚ್ಚಿಸಬೇಕು ಎಂದು ಹೇಳಿದರು.
ಕೆಡಿಪಿ ಸದಸ್ಯ ಕೋಲುಮಂಡ ರಫೀಕ್ ಮಾತನಾಡಿ, ವಿದ್ಯಾಭ್ಯಾಸಕ್ಕೆ ಹೆಚ್ಚು ಒತ್ತು ಕೊಡಬೇಕಾದ ಪರಿಸ್ಥಿತಿ ಇದೆ. ದೇಶದ ಹಿತದೃಷ್ಟಿಯಿಂದ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಕೊಡಬೇಕಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳಾದ ಸಮ್ಮಾಜ್, ಶಾರಿಯ, ಗುಡಿಯ, ರಿಹಾಲ್ ಅನುಭವ ಹಂಚಿಕೊಂಡರು. ಫುಟ್ಬಾಲ್ ಮತ್ತು ಇತರ ಕ್ರೀಡಾಕೂಟ ದಲ್ಲಿ ಭಾಗವಹಿಸಿ ಜಯಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಟಿ.ವಿ.ಮೋಹಕ್, ಎಚ್.ರಾಜೇಶ್, ಸನಲ್ ಮೂಸ, ರೋಷನ್, ನೌಸಿಬ ಅವರಿಗೆ ನೆನಪಿನ ಕಾಣಿಕೆ ಮತ್ತು ನಗದು ಬಹುಮಾನ ನೀಡ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಆದಿಶಕ್ತಿ ಟುಟೋರಿಯಲ್ಸ್ ಮುಖ್ಯಸ್ಥ ಟಿ.ಎನ್.ಕರಣ್ ಕುಮಾರ್‌ಶೆಟ್ಟಿ, ಉಪನ್ಯಾಸಕರಾದ ಲವೀನ್, ಲೋಪೆಜ್, ಗಗನ್, ಜಿಷ್ಮಾ, ಶಮಿನಾ, ಗೀತಾ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net