ಬಸವಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಸಂಬAಧ ಅಪರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಿದ್ಧತಾ ಸಭೆಯಲ್ಲಿ ಬಸವ ಅನುಯಾಯಿಗಳು ಪಾಲ್ಗೊಂಡಿದ್ದರು. ಆರ್. ಐಶ್ವರ್ಯ, ಕುಮಾರ್, ಹೆಚ್.ವಿ. ಶಿವಪ್ಪ, ಕೆ.ಎಸ್. ಮೂರ್ತಿ ಮತ್ತಿತರರು ಇದ್ದರು.
Published on:
Copied
Follow Us
ಮಡಿಕೇರಿ:
ಕೊಡಗು ಜಿಲ್ಲಾಡಳಿತದ ವತಿಯಿಂದ ಏ. 20 ರಂದು ನಡೆಯಲಿರುವ ಬಸವ ಜಯಂತಿಯನ್ನು ಆರ್ಥಪೂರ್ಣವಾಗಿ ಆಚರಿಸುವಂತಾಗಬೇಕು ಎಂದು ಕೊಡಗು ಜಿಲ್ಲಾ ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಹೇಳಿದರು. ಬಸವ ಜಯಂತಿ ಹಿನ್ನೆಲೆಯಲ್ಲಿ ತಮ್ಮ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದರು.
ರಾಜ್ಯ ಸರ್ಕಾರ ಕಾಯಕ ಯೋಗಿ ಬಸವೇಶ್ವರರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಅಧಿಕಾರಿಗಳು ಬಸವ ಅನುಯಾಯಿಗಳೊಂದಿಗೆ ಚರ್ಚಿಸಿ ಅರ್ಥಪೂರ್ಣ ಆಚರಣೆಗೆ ಮುಂದಾಗಬೇಕು. ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ಬಸವ ಜಯಂತಿ ಅರ್ಥಪೂರ್ಣ ಆಚರಣೆ ನಡೆಯಬೇಕು ಎಂದರು.
ಈ ಸಂದರ್ಭ ಮಾತನಾಡಿದ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಕೊಡಗು ವೀರಶೈವ ಮಹಾಸಭಾ ಪದಾಧಿಕಾರಿಗಳ ಸಹಕಾರದೊಂದಿಗೆ ಬಸವ ಜಯಂತಿ ಅರ್ಥಪೂರ್ಣ ಆಚರಣೆಗೆ ಕ್ರಮ ಕೈಗೊಳ್ಳಲಾಗಿದೆ. ಮಡಿಕೇರಿ ಅರಮನೆ ಆವರಣದಿಂದ ಅಂದು ಬೆಳಗ್ಗೆ 10 ಗಂಟೆಗೆ ಬಸವೇಶ್ವರರ ಭಾವಚಿತ್ರವನ್ನು ಅಲಂಕೃತ ಬೆಳ್ಳಿ ರಥದಲ್ಲಿ ವಿವಿಧ ಕಲಾತಂಡಗಳೊAದಿಗೆ ಗಾಂಧಿ ಭವನದವರೆಗೂ ಮೆರವಣಿಗೆ ನಡೆಸಲಾಗುವುದು.
ಬಳಿಕ ಗಾಂಧಿ ಭವನದಲ್ಲಿ ಬಸವಜಯಂತಿ ಕಾರ್ಯಕ್ರಮ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಕೊಡಗು ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಹೆಚ್.ವಿ. ಶಿವಪ್ಪ, ಪ್ರಧಾನ ಕಾರ್ಯದರ್ಶಿ ಶಾಂಬಶಿವಯ್ಯ, ಖಜಾಂಚಿ ಹೆಚ್.ಪಿ. ಉದಯಕುಮಾರ್,
ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್. ಮೂರ್ತಿ, ಪ್ರಧಾನ ಕಾರ್ಯದರ್ಶಿ ಬಿ.ನಟರಾಜು, ಸಮಾಜದ ಪ್ರಮುಖರಾದ ಮಡಿಕೇರಿಯ ಕೆ.ಎಸ್. ಪ್ರದೀಪ್ ಕುಮಾರ್, ಉದ್ಯಮಿ ಕುಮಾರ್ ಇದ್ದರು.