ಗೋಣಿಕೊಪ್ಪಲುವಿನಲ್ಲಿ ನಡೆದ ಅಖಿಲ ಭಾರತ ಬುಡಕಟ್ಟು ಜನಾಂಗದ ಬೃಹತ್ ಸಮಾವೇಶದಲ್ಲಿ ಭಾಗವಹಿಸಲು ಕೊಡಗಿನಿಂದ ಹೊರಟ ಗಿರಿಜನ ಪ್ರತಿನಿಧಿಗಳ ಸಭೆಯಲ್ಲಿ ಸಮಾವೇಶಕ್ಕೆ ಸಂಬAಧಿಸಿದ ಭಿತ್ತಿಪತ್ರ ಬಿಡುಗಡೆ ಮಾಡಲಾಯಿತು. ಭಾಗ್ಯ ಮೋಹನ್, ಸಿದ್ದಪ್ಪ, ಚಕ್ಕೇರ ಮನು ಕಾವೇರಪ್ಪ, ಆರ್.ಕೆ. ಚಂದ್ರ ಮತ್ತಿತರರು ಇದ್ದರು.
Published on:
Copied
Follow Us
ಮಡಿಕೇರಿ:
ನವದೆಹಲಿಯಲ್ಲಿ ಭಾನುವಾರ (ಮೇ 24) ನಡೆಯಲಿರುವ ಅಖಿಲ ಭಾರತ ಬುಡಕಟ್ಟು ಜನಾಂಗದ ಬೃಹತ್ ಸಮಾವೇಶದಲ್ಲಿ ಭಾಗವಹಿಸಲು ಕೊಡಗಿನಿಂದ ಹೊರಟ 110 ಗಿರಿಜನ ಪ್ರತಿನಿಧಿಗಳ ಸಭೆ ಗೊಣಿಕೊಪ್ಪಲು ಖಾಸಗಿ ಸಭಾಂಗಣದಲ್ಲಿ ಗುರುವಾರ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಗಿರಿಜನ ಸುರಕ್ಷಾ ವೇದಿಕೆ ಕೊಡಗು ಜಿಲ್ಲಾ ಘಟಕದ ಸಂಚಾಲಕಿ ಪಣಿಯರವರ ಭಾಗ್ಯ ಮೋಹನ್ ಈ ಸಂದರ್ಭದಲ್ಲಿ ಮಾತನಾಡಿ ಮಹಾನ್ ಜನನಾಯಕ ಬಿರ್ಸಾ ಮುಂಡಾ 150ನೇ ಜನ್ಮ ಜಯಂತಿ ಅಂಗವಾಗಿ ದೆಹಲಿಯಲ್ಲಿ ಆಯೋಜಿಸಲಾಗುತ್ತಿರುವ ಈ ಮಹಾ ಸಂಗಮದಲ್ಲಿ ದೇಶದ ಐದು ನೂರಕ್ಕೂ ಹೆಚ್ಚು ಗಿರಿಜನ ಸಮುದಾಯಗಳಿಂದ ಮೂರು ಲಕ್ಷಕ್ಕೂ ಅಧಿಕ ಗಿರಿಜನ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ. ಕೊಡಗು ಜಿಲ್ಲೆಯ 6 ಗಿರಿಜನ ಜನಜಾತಿಯ 110 ಪ್ರತಿನಿಧಿಗಳು ಸೇರಿದಂತೆ ರಾಜ್ಯದ 1250ಪ್ರತಿನಿಧಿಗಳು ವಿಶೇಷ ರೈಲಿನ ಮೂಲಕ ದೆಹಲಿಗೆ ತೆರಳುತಿದ್ದು ಗಿರಿಜನ ಸಮುದಾಯಗಳ ಸಾಂಸ್ಕೃತಿಕ ಅಸ್ತಿತ್ವ, ಧಾರ್ಮಿಕ ಪರಂಪರೆ ಹಾಗೂ ಸಾಮಾಜಿಕ ಮಾಲ್ಯಗಳನ್ನು ರಾಷ್ಟ್ರೀಯ ವೇದಿಕೆಯಲ್ಲಿ ಪರಿಚಯಿಸುವ ಅಪರೂಪದ ಅವಕಾಶ ಇದಾಗಿದೆ.
ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ದೆಹಲಿಯ ಐದು ವಿಭಿನ್ನ ಪ್ರದೇಶಗಳಿಂದ ಭವ್ಯ ಸಾಂಸ್ಕೃತಿಕ ಶೋಭಾಯಾತ್ರೆ ನಡೆಯಲಿದ್ದು ಗಿರಿಜನ ಬುಡಕಟ್ಟು ಸಮುದಾಯಗಳ ವೈವಿಧ್ಯಮಯ ವೇಷಭೂಷಣ, ಕಲಾ ಪರಂಪರೆ, ಜನಪದ ಸಂಸ್ಕೃತಿ ಹಾಗೂ ಜೀವನ ಶೈಲಿಯನ್ನು ದೇಶದ ಮುಂದೆ ತೆರೆದಿಡಲಿದೆ. ಬಳಿಕ ಕೆಂಪು ಕೋಟೆ ಮೈದಾನದಲ್ಲಿ ಶೋಭಾಯಾತ್ರೆ ಒಂದಾಗಲಿದೆ.
ಶೋಭಾಯಾತ್ರೆ ಮುಗಿದ ಮೇಲೆ ಬೃಹತ್ ಸಾರ್ವಜನಿಕ ಸಭೆ ನಡೆಯಲಿದೆ. ಕೇಂದ್ರ ಸಚಿವ ಅಮಿತ್ ಷಾ, ದೇಶದ ವಿವಿಧ ಭಾಗಗಳಿಂದ ಆಗಮಿಸಿದ ಗಿರಿಜನ ಮುಖಂಡರು, ಚಿಂತಕರು, ಸ್ವಾಮಿಜಿಗಳು, ಕಲಾವಿದರು ಹಾಗೂ ಸಮಾಜದ ಪ್ರತಿನಿಧಿಗಳು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ ಎಂದರು.
ಗಿರಿಜನ ಮುಖಂಡ ಸಿದ್ದಪ್ಪ ಮಾತನಾಡಿ ಸ್ವಾತಂತ್ರ‍್ಯ ನಂತರ ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಇಷ್ಟೊಂದು ಬೃಹತ್ ಪ್ರಮಾಣದಲ್ಲಿ ಒಂದೆಡೆ ಗಿರಿಜನ ಪ್ರತಿನಿಧಿಗಳು ಸಮಾಗಮವಾಗುತ್ತಿರುವುದು ವಿಷೇಶವಾಗಿದೆ. ದೇಶದಲ್ಲಿ ಅಂದಾಜು 700ಕ್ಕೂ ಹೆಚ್ಚು ಬುಡಕಟ್ಟು ಜನಾಂಗದವರಿದ್ದು ಇವರಲ್ಲಿ ಹಲವರು ಇನ್ನೂ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಈ ನಿಟ್ಟಿನಲ್ಲಿ ಈ ಸಂಸ್ಕೃತಿ, ಪರಂಪರೆ ಹಾಗೂ ಹಕ್ಕುಗಳ ರಕ್ಷಣೆಗಾಗಿ ಸಂಘಟಿತ ಸಮಾವೇಶದ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯುವ ಪ್ರಯತ್ನವಾಗಿದೆ ಎಂದು ಹೇಳಿದರು.
ಪ್ರಾಂತ ವನವಾಸಿ ಕಲ್ಯಾಣ ಅಧ್ಯಕ್ಷ ಚಕ್ಕೇರ ಮನು ಕಾವೇರಪ್ಪ ಮಾತನಾಡಿ ದೇಹಲಿಯ ಸಮಾವೇಶದಲ್ಲಿ ಭಾಗವಹಿಸುವ ಎಲ್ಲಾ ಪ್ರತಿನಿಧಿಗಳಿಗೂ ಶುಭ ಹಾರೈಸಿದರು.
ಜೇನುಕುರುಬ ಸಮುದಾಯದ ಪ್ರತಿನಿಧಿಗಳಾದ ಆರ್.ಕೆ. ಚಂದ್ರ, ದೇವರಕಾಡು ನಿತ್ಯ, ಸೋಲಿಗರ ಉಮೇಶ್, ಅಂಚೆತಿಟ್ಟು ಸಂಜೀವ, ಮರಾಠಿ ಸಮುದಾಯದ ಪರಮೇಶ್ವರ್, ವಾಲ್ಮೀಕಿ ಸಮುದಾಯದ ಮುತ್ತುರಾಜ್, ಪ್ರಮುಖರಾದ ಅಮ್ಮುಣಿ, ಚೋಮು, ಶಶಿಕಲಾ, ಜಯಲಕ್ಷಿö್ಮÃ, ಭೋಜ, ರಿಧೀಶ್ ಮತ್ತಿತರರು ಇದ್ದರು.
ಅಖಿಲ ಭಾರತ ಬುಡಕಟ್ಟು ಜನಾಂಗದ ಬೃಹತ್ ಸಮಾವೇಶಕ್ಕೆ ಸಂಬAಧಿಸಿದ ಭಿತ್ತಿಪತ್ರವವನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.