ತಾಲೂಕು ಆಡಳಿತದಿಂದ ಗಣರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆ

 ಕುಶಾಲನಗರ ತಾಲೂಕು ತಹಸೀಲ್ದಾರ್ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ಕಿರಣ್ ಜಿ. ಗೌರಯ್ಯ, ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಗಿರೀಶ್, ಹಿರಿಯ ನಾಗರಿಕ ಫಜಲುಲ್ಲಾ ಉಪಸ್ಥಿತರಿದ್ದರು.
ಕುಶಾಲನಗರ ತಾಲೂಕು ತಹಸೀಲ್ದಾರ್ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ಕಿರಣ್ ಜಿ. ಗೌರಯ್ಯ, ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಗಿರೀಶ್, ಹಿರಿಯ ನಾಗರಿಕ ಫಜಲುಲ್ಲಾ ಉಪಸ್ಥಿತರಿದ್ದರು.
Published on
ಕುಶಾಲನಗರ : ತಾಲೂಕು‌ ಆಡಳಿತದಿಂದ ಇದೇ ಜನವರಿ 26ರ ಗಣರಾಜ್ಯೋತ್ಸವ ಆಚರಣೆ ಸಂಬಂಧ ಪೂರ್ವಭಾವಿ ಸಭೆ ಕುಶಾಲನಗರ ಪೊಲೀಸ್ ವಿಶ್ರಾಂತಿ ಗೃಹದಲ್ಲಿ ಗುರುವಾರ ನಡೆಯಿತು.
ಕುಶಾಲನಗರ ತಾಲೂಕು ತಹಸೀಲ್ದಾರ್ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ಕಿರಣ್ ಜಿ. ಗೌರಯ್ಯ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು, ಸದಸ್ಯರೊಂದಿಗೆ ಗಣರಾಜ್ಯೋತ್ಸವ ದಿನಾಚರಣೆಯ ರೂಪರೇಷೆಗಳ ಬಗ್ಗೆ ಚರ್ಚೆ ನಡೆಯಿತು.
ಪ್ರತಿ ವರ್ಷದಂತೆ ಗಣರಾಜ್ಯೋತ್ಸವ ವನ್ನು ಯಶಸ್ವಿಯಾಗಿ ಆಚರಿಸಲು ಎಲ್ಲಾ ಸಂಘಸಂಸ್ಥೆ, ಸಂಘಟನೆಗಳ ಸಹಕಾರ ಅಗತ್ಯವಿದ್ದು ಎಲ್ಲರೂ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಮಾರಂಭವನ್ನು ಯಶಸ್ವಿಗೊಳಿಸಲು ತಹಸೀಲ್ದಾರ್ ಮನವಿ‌ ಮಾಡಿದರು.
ಸಭೆಯಲ್ಲಿ ಪಾಲ್ಗೊಂಡಿದ್ದವರು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರಲ್ಲದೆ, ಸಾಧಕರು ಹಾಗೂ ಸಾಮಾಜಿಕ ಹೋರಾಟಗಾರರನ್ನು ಸನ್ಮಾನಿಸುವ ಕುರಿತಾದ ಸಲಹೆ ಬಗ್ಗೆ ಚರ್ಚೆ ನಡೆಯಿತು.
ಈ ಸಂದರ್ಭ ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಗಿರೀಶ್, ಹಿರಿಯ ನಾಗರಿಕ ಫಜಲುಲ್ಲಾ ಸೇರಿದಂತೆ ವಿವಿಧ ಇಲಾಖೆಗಳ ಪ್ರತಿನಿಧಿಗಳು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net