ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಮಾತನಾಡಿ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧಿಸಿದಂತೆ ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ೨೭೫ ಮತಗಟ್ಟೆಗಳಿದ್ದು, ೨,೩೮,೪೪೭ ಮತದಾರರಿಗೆ ಗಣತಿ ನಮೂನೆಯನ್ನು ವಿತರಿಸಲಾಗಿದೆ. ಇವರಲ್ಲಿ ೧,೫೧,೭೬೮ ಮಂದಿಯ ಗಣತಿ ನಮೂನೆಯ ಡಿಜಿಟಲೀಕರಣ ಮಾಡಲಾಗಿದ್ದು, ಶೇ.೬೩ ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು.