ರಾಷ್ಟ್ರ ಮಟ್ಟಕ್ಕೆ ಮಿಲನಾ ಭರತ್ ಆಯ್ಕೆ

2025-26ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಭರತನಾಟ್ಯ, ಕೂಚುಪುಡಿ ಮತ್ತು ಒಡಿಸ್ಸಿ ವಿಭಾಗದಲಿ ಕೊಡಗಿನ ಮಿಲನಾ ಕೆ. ಭರತ್ ಪ್ರಶಸ್ತಿ ಪಡೆದು ರಾಷ್ಟçಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಇದ್ದರು.

Published on
ಮಡಿಕೇರಿ:
ಬೆಂಗಳೂರಿನಲ್ಲಿ ಈಚೆಗೆ ನಡೆದ 2025-26ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಭರತನಾಟ್ಯ, ಕೂಚುಪುಡಿ ಮತ್ತು ಒಡಿಸ್ಸಿ ವಿಭಾಗದಲ್ಲಿ ಕೊಡಗಿನ ಮಿಲನಾ ಕೆ. ಭರತ್ ಪ್ರಶಸ್ತಿ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲೆಯ ಮೀನುಗಾರಿಕೆ ಇಲಾಖೆಯಲ್ಲಿ ಸಹಾಯಕ ನಿರ್ದೇಶಕಿಯಾಗಿರುವ ಮಿಲನಾ ನೃತ್ಯ ಗುರು ವಿದ್ವಾನ್ ರಾಜೇಶ್ ಆಚಾರ್ಯ ಅವರಿಂದ ಮಾರ್ಗದರ್ಶನ ಪಡೆದುಕೊಂಡಿದ್ದರು. ಅಭಿನಯ ಕಲಾ ಮಿಲನ ಚಾರಿಟೇಬಲ್ ಟ್ರಸ್ಟ್ ಅಡಿಯಲ್ಲಿ ಶನಿವಾರಸಂತೆ ಮತ್ತು ಭಾಗಮಂಡಲದಲ್ಲಿ ನಾಟ್ಯ ಮಿಲನ ನೃತ್ಯ ಶಾಲೆಯನ್ನು ಇವರು ಮುನ್ನಡೆಸುತ್ತಿದ್ದಾರೆ. ಇವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಅರೆಭಾಷಿಕರ ಸಂಸ್ಕೃತಿ ಬಿಂಬಿಸುವ ನೃತ್ಯ ರೂಪಕ ವ್ಯಾಪಕ ಜನಮೆಚ್ಚುಗೆಗೆ ಪಾತ್ರವಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net