ಅಂಡರ್-15 ಬಾಲಕರ ವಿಭಾಗದಲ್ಲಿ ಸೈನಿಕ ಶಾಲೆ ಚಂದ್ರಪುರ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಸೈನಿಕ ಶಾಲೆ ಇಂಫಾಲ್ ರನ್ನರ್-ಅಪ್ ಸ್ಥಾನ ಪಡೆದುಕೊಂಡಿತು.
ಅಂಡರ್-17 ಬಾಲಕಿಯರ ವಿಭಾಗದಲ್ಲಿ ಸೈನಿಕ ಶಾಲೆ ಸುಜಾನ್ಪುರ್ ತಿರಾ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಸೈನಿಕ ಶಾಲೆ ಚಂದ್ರಪುರ ರನ್ನರ್-ಅಪ್ ಸ್ಥಾನ ಗಳಿಸಿತು.
ಅಂಡರ್-17 ಬಾಲಕರ ವಿಭಾಗದಲ್ಲಿ ಸೈನಿಕ ಶಾಲೆ ಇಂಫಾಲ್ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಆತಿಥೇಯ ಸೈನಿಕ ಶಾಲೆ ಕೊಡಗು ರನ್ನರ್-ಅಪ್ ಸ್ಥಾನ ಪಡೆಯಿತು.
ಅತ್ಯುತ್ತಮ ಆಟಗಾರ, ಅತ್ಯುತ್ತಮ ಗೋಲ್‌ಕೀಪರ್ ಹಾಗೂ ಗರಿಷ್ಠ ಗೋಲು ಗಳಿಸಿದ ಆಟಗಾರರಿಗೆ ವೈಯಕ್ತಿಕ ಪ್ರಶಸ್ತಿಗಳನ್ನು ನೀಡಲಾಯಿತು