ಅರಣ್ಯ ಕಾಲೇಜು ವಿದ್ಯಾರ್ಥಿಗಳ ಮನವಿ ಆಲಿಸಿದ ಸಚಿವ

ಅರಣ್ಯ ಇಲಾಖೆ ಹುದ್ದೆಗಳ ನೇಮಕಾತಿಯಲ್ಲಿ ಅರಣ್ಯ ಪದವೀಧರರಿಗೆ ಮೀಸಲಾತಿಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕರ್ನಾಟಕ ಅರಣ್ಯ ಶಾಸ್ತ್ರ ವಿದ್ಯಾರ್ಥಿಗಳ ಮತ್ತು ಪದವೀಧರರ ಸಂಘ ಮುಷ್ಕರ ನಡೆಸುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ ಈಶ್ವರ ಖಂಡ್ರೆ ಮತ್ತು ಎ.ಎಸ್. ಪೊನ್ನಣ್ಣ ಮನವಿ ಪತ್ರ ಸ್ವೀಕರಿಸಿದರು. ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು, ವಿದ್ಯಾರ್ಥಿಗಳು ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಅರಣ್ಯ ಇಲಾಖೆ ಹುದ್ದೆಗಳ ನೇಮಕಾತಿಯಲ್ಲಿ ಅರಣ್ಯ ಪದವೀಧರರಿಗೆ ಮೀಸಲಾತಿಗೆ ಒತ್ತಾಯ
  • ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ
  • ಮನವಿ ಆಲಿಸಿದ ಈಶ್ವರ್ ಖಂಡ್ರೆ, ಪೊನ್ನಣ್ಣ
ಮಡಿಕೇರಿ:
ಅರಣ್ಯ ಕಾಲೇಜು ವಿದ್ಯಾರ್ಥಿಗಳು ಸರ್ಕಾರದ ಮುಂದೆ ಇಟ್ಟಿರುವ ಬೇಡಿಕೆಗಳನ್ನು ಪರಿಶೀಲಿಸುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರೂ ಆಗಿರುವ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭರವಸೆ ನೀಡಿದ್ದಾರೆ.
ಅರಣ್ಯ ಇಲಾಖೆ ಹುದ್ದೆಗಳ ನೇಮಕಾತಿಯಲ್ಲಿ ಅರಣ್ಯ ಪದವೀಧರರಿಗೆ ಮೀಸಲಾತಿಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕರ್ನಾಟಕ ಅರಣ್ಯ ಶಾಸ್ತ್ರ ವಿದ್ಯಾರ್ಥಿಗಳ ಮತ್ತು ಪದವೀಧರರ ಸಂಘ ಮುಷ್ಕರ ನಡೆಸುತ್ತಿದ್ದ ಸ್ಥಳಕ್ಕೆ ಬುಧವಾರ ಭೇಟಿ ನೀಡಿ ಮನವಿ ಸ್ವೀಕರಿಸಿದ ನಂತರ ಈ ಭರವಸೆ ಕೊಟ್ಟಿದ್ದಾರೆ.
ಅರಣ್ಯ ಮಹಾವಿದ್ಯಾಲಯ ಶಿರಸಿ, ಅರಣ್ಯ ಮಹಾವಿದ್ಯಾಲಯ ಪೊನ್ನಂಪೇಟೆ ಹಾಗೂ ಅರಣ್ಯ ಮಹಾವಿದ್ಯಾಲಯ ಇರುವಕ್ಕಿಯ ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಯಾದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಸಂರಕ್ಷಣಾಧಿಕಾರಿ ಉಪ ವಲಯ ಅರಣ್ಯಾಧಿಕಾರಿ ಹುದ್ದೆಯ ನೇರ ನೇಮಕಾತಿಯಲ್ಲಿ ಬಿಎಸ್ಸಿ ಅರಣ್ಯಶಾಸ್ತ್ರ ಶಾಸ್ತ್ರ ಪದವಿಯನ್ನೇ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡುವ ಕುರಿತು ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿ ಮಾತನಾಡಿದ ಈಶ್ವರ ಖಂಡ್ರೆ ಮತ್ತು ಪೊನ್ನಣ್ಣ ನಿಮ್ಮ ಬೇಡಿಕೆ ಬಗ್ಗೆ ಚರ್ಚೆ ನಡೆಸಲಾಗಿದೆ. ನಮ್ಮ ಸರ್ಕಾರ ಬಂದ ಮೇಲೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ನಿಮಗೆಲ್ಲ ಉಜ್ವಲ ಭವಿಷ್ಯವಿದೆ. ನಿಮ್ಮ ಬೇಡಿಕೆಗಳ ಬಗ್ಗೆ ಪರಿಗಣಿಸುತ್ತೇವೆ. ಮುಷ್ಕರ ಕೈ ಬಿಡಿ ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net