ಕುಶಾಲನಗರ: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೆಕೂಡಿಗೆ ಗ್ರಾಮದಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಕಾಂಕ್ರೀಟ್ ರಸ್ತೆಯನ್ನು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಭಾನುವಾರ ಉದ್ಘಾಟಿಸಿದರು.
ಈ ಸಾಲಿನಲ್ಲಿ ಮಡಿಕೇರಿ ಕ್ಷೇತ್ರ ವ್ಯಾಪ್ತಿಯ ಅನೇಕ ಗ್ರಾಮಾಂತರ ಪ್ರದೇಶದ ಸಂಪರ್ಕ ರಸ್ತೆಗಳನ್ನು ನಿರ್ಮಿಸಲಾಗಿದ್ದು, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗಿದೆ. ಮುಂದೆಯೂ ಮೂಲಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಕೂಡಿಗೆ ಗ್ರಾಮ ಪಂಚಾಯತಿ ಸದಸ್ಯರಾದ ಅರುಣ್‌ರಾವ್, ಅನಂತ, ಶಿವಕುಮಾರ್, ಶ್ರೀ ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಕೆ.ಎಸ್.ಚಂದ್ರು ಹಾಗೂ ಪಕ್ಷದ ಕಾರ್ಯಕರ್ತರು ಇದ್ದರು.