ಸಿದ್ದಾಪುರ: ಪೊನ್ನಂಪೇಟೆ ತಾಲೂಕಿನ ಪೊನ್ನಪ್ಪಸಂತೆ ಬಾಳಲೆ ಹಾಗೂ ಮಾಪಿಳೆತೋಡು ಹುದಿಕೇರಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶುಕ್ರವಾರ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಸುಮಾರು 2.30 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ. ಸ್ಥಳೀಯ ಜನರ ಸಂಚಾರಕ್ಕೆ ಅನುಕೂಲವಾಗುವುದರ ಜತೆಗೆ ಕೃಷಿ ಉತ್ಪನ್ನಗಳ ಸಾಗಣೆ ಹಾಗೂ ವ್ಯಾಪಾರ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಕಾಮಗಾರಿ ಶೀಘ್ರದಲ್ಲೇ ಆರಂಭಗೊಳ್ಳಲಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ತಾಲೂಕು ಪ್ರಚಾರ ಸಮಿತಿ ಅಧ್ಯಕ್ಷ ಟಾಟು ಮೊಣ್ಣಪ್ಪ, ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಮಲ್ಲಂಡ ಧ್ಯಾನ್ ದೇವಯ್ಯ, ರೈತ ಸಂಘದ ಪ್ರಮುಖರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.