ಜನಸ್ಪಂದನಾ ಸಭೆಯಲ್ಲಿ 85ಕ್ಕೂ ಹೆಚ್ಚು ಅರ್ಜಿಗಳ ಸಲ್ಲಿಕೆ

ಮುಖ್ಯಮಂತ್ರಿ ಕಾನೂನು ಸಲಹೆಗಾರರೂ ಆದ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅಧ್ಯಕ್ಷತೆಯಲ್ಲಿ ಭಾಗಮಂಡಲದಲ್ಲಿ ನಡೆದ ಜನಸ್ಪಂದನಾ ಸಭೆಯಲ್ಲಿ ಅರ್ಜಿ ಸಲ್ಲಿಸಲು ಆಗಮಿಸಿದ್ದ ಸಾರ್ವಜನಿಕರು.
ಮುಖ್ಯಮಂತ್ರಿ ಕಾನೂನು ಸಲಹೆಗಾರರೂ ಆದ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅಧ್ಯಕ್ಷತೆಯಲ್ಲಿ ಭಾಗಮಂಡಲದಲ್ಲಿ ನಡೆದ ಜನಸ್ಪಂದನಾ ಸಭೆಯಲ್ಲಿ ಅರ್ಜಿ ಸಲ್ಲಿಸಲು ಆಗಮಿಸಿದ್ದ ಸಾರ್ವಜನಿಕರು.
Published on
ಮಡಿಕೇರಿ:
ಮುಖ್ಯಮಂತ್ರಿ ಕಾನೂನು ಸಲಹೆಗಾರರೂ ಆದ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅಧ್ಯಕ್ಷತೆಯಲ್ಲಿ ಮಡಿಕೇರಿ ತಾಲೂಕು ಭಾಗಮಂಡಲದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಶನಿವಾರ ನಡೆದ ಜನಸ್ಪಂದನಾ ಸಭೆಯಲ್ಲಿ ಸಾರ್ವಜನಿಕರಿಂದ 85 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು.
ಕಂದಾಯ ಇಲಾಖೆಗೆ ಸಂಬAಧಿಸಿದAತೆ 15, ಗ್ರಾಮೀಣಾಭಿವೃದ್ಧಿ 7, ಪಂಚಾಯತ್ ರಾಜ್ ಸಂಬAಧಿಸಿದAತೆ 10, ಸೆಸ್ಕ್ 3, ಆಹಾರ 3, ರಸ್ತೆ ಸೇರಿದಂತೆ ವಿವಿಧ ಇಲಾಖೆಗಳ 46 ಒಟ್ಟು 85 ಅರ್ಜಿಗಳು ಸಲ್ಲಿಕೆಯಾದವು.
ಪ್ರತಿಯೊಬ್ಬ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕರು, ಸ್ಥಳದಲ್ಲಿಯೇ ಸಂಬAಧಪಟ್ಟ ಅಧಿಕಾರಿಗಳನ್ನು ಕರೆದು ಅರ್ಜಿ ಪರಿಶೀಲಿಸಿ ಒಂದು ವಾರದಲ್ಲಿ ಬಗೆಹರಿಸಬೇಕು ಎಂದು ಸೂಚಿಸಿದರು.
ಸಾರ್ವಜನಿಕರ ಅಹವಾಲುಗಳಿಗೆ ಕೂಡಲೇ ಸ್ಪಂದಿಸಬೇಕು, ವಿಳಂಬ ಮಾಡಬಾರದು ಎಂದು ತಾಕೀತು ಮಾಡಿದರು. ಸಭೆ ಆರಂಭದಲ್ಲಿ ಮಾತನಾಡಿದ ಪೊನ್ನಣ್ಣ ಸಾರ್ವಜನಿಕರ ಸಮಸ್ಯೆಯನ್ನು ಕಚೇರಿ ಹಂತದಲ್ಲಿಯೇ ಪರಿಹರಿಸುವಂತಾಗಬೇಕು. ಕಾನೂನು ಬದ್ಧವಾಗಿ ಸಮಸ್ಯೆಗಳನ್ನು ತೀರ್ಮಾನಿಸಿ, ಬಗೆಹರಿಸಬೇಕು. ಯಾರನ್ನೂ ಕೂಡ ಸತಾಯಿಸಬಾರದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ವಿಧಾನಸಭಾ ಕ್ಷೇತ್ರವಾರು ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜನರ ಮನೆ ಬಾಗಿಲಿಗೆ ಸರ್ಕಾರದ ಸೌಲಭ್ಯ ತಲುಪಿಸಲು ಸರ್ಕಾರ ಪ್ರಯತ್ನಿಸಿದೆ. ಆ ದಿಸೆಯಲ್ಲಿ ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಬೇಕು ಎಂದು ಹೇಳಿದರು.
ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ನೆರವಂಡ ಉಮೇಶ್, ಪ್ರಮುಖರಾದ ಬಾಲಚಂದ್ರ ನಾಯರ್, ತಹಸೀಲ್ದಾರ್ ಶ್ರೀಧರ, ತಾ.ಪಂ. ಇಒ ಶೇಖರ್ ಇತರರು ಇದ್ದರು. ಸುಮಾರು 36 ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡು ತಮ್ಮ ಇಲಾಖೆಗೆ ಸಂಬAಧಿಸಿದ ಸಾರ್ವಜನಿಕರ ಅಹವಾಲಿಗೆ ಸ್ಪಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net