ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಕಾಟಿಮಾಡ ಜಿಮ್ಮಿ ಅಣ್ಣಯ್ಯ ಮಾತನಾಡಿ, ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು ಎಂಬಂತೆ ಮಗುವಿನ ವಿದ್ಯಾಭ್ಯಾಸ ಉತ್ತಮವಾಗಿ ಸಾಗಬೇಕಾದರೆ ಮೊದಲು ಅಡಿಪಾಯ ಗಟ್ಟಿಯಾಗಿರಬೇಕು. ಅಂತಹ ಶಿಕ್ಷಣದ ಅಡಿಪಾಯವನ್ನು ಇತ್ತೀಚಿನ ದಿನಗಳಲ್ಲಿ ಪೊನ್ನಂಪೇಟೆ ಭಾಗದ ಮದರ್ಸ್ ಆರ್ಮ್ ಮಾಡುತ್ತಾ ಬರುತ್ತಿದೆ. ಈ ಶಾಲೆಯಲ್ಲಿ ನರ್ಸರಿಯಿಂದ ಯುಕೆಜಿವರೆಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಈ ಭಾಗದ ಪಾಲಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಮನವಿ ಮಾಡಿದರು.