ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನಾಚರಣೆ

 ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನವನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮಡಿಕೇರಿಯ ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ಆಚರಿಸಲಾಯಿತು. ಕೇಶವ ಕಾಮತ್, ಟಿ.ಪಿ. ರಮೇಶ್, ವಾಸು ರೈ, ಕೆ.ವಿ. ಉಮೇಶ್, ಭಾರತಿ ರಮೇಶ್, ರೇಣುಕಾ, ಅಜಯ್ ಇದ್ದರು.
ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನವನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮಡಿಕೇರಿಯ ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ಆಚರಿಸಲಾಯಿತು. ಕೇಶವ ಕಾಮತ್, ಟಿ.ಪಿ. ರಮೇಶ್, ವಾಸು ರೈ, ಕೆ.ವಿ. ಉಮೇಶ್, ಭಾರತಿ ರಮೇಶ್, ರೇಣುಕಾ, ಅಜಯ್ ಇದ್ದರು.
Published on
ಮಡಿಕೇರಿ:
ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಲ್ಲಿ ಒಬ್ಬರಾದ ಮೈಸೂರಿನ ಮಹಾರಾಜ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನವನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮಡಿಕೇರಿಯ ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ಗುರುವಾರ ಆಚರಿಸಲಾಯಿತು.
ಈ ಸಂದರ್ಭ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ಮರೆಯಲು ಅಸಾಧ್ಯವಾದಂತಹ ದಿವ್ಯ ಚೇತನ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್. ಅವರು ಕನ್ನಡ ನಾಡಿಗೆ ಮಾಡಿದ ಸೇವೆಯನ್ನು ಎಷ್ಟು ವರ್ಣಿಸಿದರೂ ಸಾಲದು. ಇಂದು ಶತಮಾನೋತ್ಸವ ಆಚರಿಸುತ್ತಿರುವ ಎಲ್ಲ ಸಂಘ-ಸAಸ್ಥೆಗಳನ್ನು ಪ್ರಾರಂಭಿಸಿದ್ದು ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್.
ಸ್ಟೇಟ್ ಬ್ಯಾಂಕ್ ಆಫ್ ಮೈಸೂರ್, ಸ್ಟೇಟ್ ಅಪೆಕ್ಸ್ ಬ್ಯಾಂಕ್, ಲ್ಯಾಂಡ್ ಬ್ಯಾಂಕ್, ಮೈಸೂರು ರಾಜ್ಯ ಕೈಗಾರಿಕಾ ಬ್ಯಾಂಕ್, ವಿಶ್ವವಿದ್ಯಾಲಯ, ಮಹಾರಾಜ ಕಾಲೇಜು, ಮಹಾರಾಣಿ ಕಾಲೇಜು, ಯುವರಾಜ ಕಾಲೇಜು, ವಾಣಿವಿಲಾಸ ಸಾಗರದ ಆಣೆಕಟ್ಟು, ಭಾರತದ ಮೊದಲ ಬೃಹತ್ ಅಣೆಕಟ್ಟು ಕೃಷ್ಣರಾಜಸಾಗರ ಅಣೆಕಟ್ಟು, ಶಿವನಸಮುದ್ರದಲ್ಲಿ ಭಾರತದ ಅತಿ ದೊಡ್ಡ ವಿದ್ಯುತ್ ಉತ್ಪಾದನಾ ಕೇಂದ್ರ, ರಾಜ್ಯ ವ್ಯಾಪ್ತಿ 250ಕ್ಕೂ ಹೆಚ್ಚು ಆಸ್ಪತ್ರೆಗಳು, ಕೊಡಗಿನಲ್ಲಿ ಕಾಫಿ ಸಂಶೋಧನಾ ಕೇಂದ್ರಗಳನ್ನು ಪ್ರಾರಂಭಿಸಿದರು.
ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಳ್ವಿಕೆಯಲ್ಲಿ ಗ್ರಾಮ ನಿರ್ಮಲೀಕರಣ, ವೈದ್ಯಕೀಯ ಸಹಾಯ, ವಿದ್ಯಾ ಪ್ರಚಾರ, ನೀರಿನ ಸೌಕರ್ಯ, ಪ್ರಯಾಣ ಸೌಲಭ್ಯ ಮುಂತಾದ ಕ್ಷೇತ್ರಗಳು ಸ್ವಯಂ ಆಡಳಿತ ಸಂಸ್ಥೆಗಳಾದವು. ಹೊಸ ರೈಲು ದಾರಿಗಳ ನಿರ್ಮಾಣಗಳಾದವು. ದೇಶದಲ್ಲಿ ಆಗಿ ಹೋದ ಎಲ್ಲಾ ರಾಜರುಗಳಿಗೆ ಜನಸೇವೆಯಲ್ಲಿ ಅಗ್ರಗಣ್ಯರಾಗಿ ನಿಲ್ಲುವವರು ನಾಲ್ವಡಿ ಕೃಷ್ಣರಾಜ ಒಡೆಯರ್ ರವರು ಎಂದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ ರಮೇಶ್, ಸಂಘಟನಾ ಕಾರ್ಯದರ್ಶಿ ವಾಸು ರೈ, ಕುಶಾಲನಗರ ತಾಲೂಕು ಗೌರವ ಕೋಶಾಧಿಕಾರಿ ಕೆ.ವಿ. ಉಮೇಶ್, ಸದಸ್ಯರುಗಳಾದ ಭಾರತಿ ರಮೇಶ್, ರೇಣುಕಾ, ಅಜಯ್ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net