28ರಂದು ನಾರಾಯಣಗುರು ಜಯಂತಿ

ಎಸ್‌ಎನ್‌ಡಿಪಿ ಸಂಘದ ಕಚೇರಿಯಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿ
ಎಸ್‌ಎನ್‌ಡಿಪಿ ಸಂಘದ ಕಚೇರಿಯಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿ
Published on

ಸಿದ್ದಾಪುರ:

ಶ್ರೀ ನಾರಾಯಣ ಗುರು ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ) ಯೂನಿಯನ್ ಕೊಡಗು ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿಯನ್ನು ಆ. 28ರಂದು ಸಿದ್ದಾಪುರದಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಕೊಡಗು ಅಧ್ಯಕ್ಷ ವಿ.ಕೆ.ಲೋಕೇಶ್ ತಿಳಿಸಿದರು.


ಅಂದು ಬೆಳಗ್ಗೆ 9.30ಕ್ಕೆ ಗುರುಪೂಜೆ, 10ಕ್ಕೆ ಧ್ವಜಾರೋಹಣ ನಡೆಯಲಿದೆ. ಬೆಳಗ್ಗೆ 10.30ಕ್ಕೆ ಅಯ್ಯಪ್ಪ ದೇವಾಲಯದಿಂದ ಸ್ವರ್ಣಮಾಲಾ ಕಲ್ಯಾಣ ಮಂಟಪದವರೆಗೆ ವಾದ್ಯಗೋಷ್ಠಿ ಹಾಗೂ ಜಾನಪದ ಕಲಾತಂಡಗಳೊಂದಿಗೆ ಅಲಂಕೃತ ಮಂಟಪದಲ್ಲಿ ಶ್ರೀ ನಾರಾಯಣ ಗುರುಗಳ ಮೂರ್ತಿಯ ಮೆರವಣಿಗೆ ನಡೆಯಲಿದೆ. ಬಳಿಕ ಸಭಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸಂಸದ ಯದುವೀರ್, ಶಾಸಕ ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ವಿಧಾನ ಸಭಾಧ್ಯಕ್ಷ ಕೆ.ಜಿ.ಬೋಪಯ್ಯ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ, ರಾಜ್ಯ ಈಡಿಗ ಸಮಾಜದ ಉಪಾಧ್ಯಕ್ಷ ಮಹೇಶ್ ಕುಮಾರ್, ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಚಿರಿಯಪಂಡ ಸುರೇಶ್, ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ಅಧ್ಯಕ್ಷ ವಿ.ಎಂ. ವಿಜಯನ್ ಹಾಗೂ ಉದ್ಯಮಿಗಳಾದ ಏಡಿಕೇರಿ ಪ್ರಸನ್ನ, ಟಿ.ಎಲ್. ಪ್ರವೀಣ್ ಇತರರು ಭಾಗವಹಿಸಲಿದ್ದಾರೆ.
2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಇದೇ ಸಂದರ್ಭದಲ್ಲಿ ಸಾಧಕರನ್ನು ಸನ್ಮಾನಿಸಲಾಗುವುದು. ಸಂಜೆ ಕಣ್ಣೂರು ಹರೀಶ್‌ಫೋಕ್ ಮೆಗಾ ಶೋ ತಂಡದಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಯಂತಿ ಆಚರಣಾ ಸಮಿತಿ ಅಧ್ಯಕ್ಷ ಹರಿದಾಸ್, ಕಾರ್ಯದರ್ಶಿ ರೆಜಿತ್ ಕುಮಾರ್, ವನಿತಾ ಘಟಕದ ಜಿಲ್ಲಾಧ್ಯಕ್ಷೆ ರೀಶಾ ಸುರೇಂದ್ರನ್, ಪ್ರೇಮನಂದ, ಗಿರೀಶ್ ರಾಜಶೇಖರ್ ಹಾಗೂ ಮೋಹನ್ ದಾಸ್ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net