೨೭ ವರ್ಷಗಳ ಶಿಕ್ಷಕ ವೃತ್ತಿಯ ಸೇವಾನುಭವ ಹೊಂದಿರುವ ಶಿಕ್ಷಕಿ ವೀಣಾ ರೈ ಅವರು ಸನ್ಮಾನ ಸ್ವೀಕರಿಸುತ್ತಿರುವುದು ಹೆಮ್ಮೆ ಹಾಗೂ ಸಂತೋಷದ ಕ್ಷಣವಾಗಿದೆ. ಪಿಎಂ ಶ್ರೀ ಶಾಲೆಗಳಲ್ಲಿ ದೊರೆಯುತ್ತಿರುವ ಸೌಲಭ್ಯಗಳು, ಪಠ್ಯೇತರ ಚಟುವಟಿಕೆಗಳಿಗೆ ನೀಡುತ್ತಿರುವ ಪ್ರೋತ್ಸಾಹ ಹಾಗೂ ವಿದ್ಯಾರ್ಥಿಗಳ ಆರೋಗ್ಯದ ಕಾಳಜಿಯಿಂದ ಸರ್ಕಾರ ಒದಗಿಸುತ್ತಿರುವ ಪೌಷ್ಟಿಕ ಆಹಾರ, ಪುಸ್ತಕ ಮತ್ತು ಸಮವಸ್ತ್ರದಂತಹ ಸೌಲಭ್ಯಗಳನ್ನು ಶ್ಲಾಘಿಸಿದರು. ವಿಶೇಷ ಮಕ್ಕಳಿಗೂ ಅಗತ್ಯ ಸೌಲಭ್ಯಗಳು ದೊರೆಯುತ್ತಿರುವುದು ಸಂತಸದ ವಿಚಾರ ಎಂದರು.