ಸಾಮಾಜಿಕ ನ್ಯಾಯದಿಂದ ರಾಷ್ಟ್ರದ ಅಭಿವೃದ್ಧಿ

ಬಿಟ್ಟಂಗಾಲದ ರೋಟರಿ ಪ್ರಾಢಶಾಲೆಯಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನ ಕಾರ್ಯಕ್ರಮ ಆಯೋಜಿಸಲಾಗಿತ್ತು. ನ್ಯಾ .ಮಂಜುನಾಥ್, ನ್ಯಾ ಪ್ರದೀಪ್ ಪೋತದಾರ್, ಖಲೀಲ್ ಅಹಮ್ಮದ್,  ಹಸೀನಾ , ರೇಷ್ಮಾ , ರಂಜಿತ್ ಇದ್ದರು.
ಬಿಟ್ಟಂಗಾಲದ ರೋಟರಿ ಪ್ರಾಢಶಾಲೆಯಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನ ಕಾರ್ಯಕ್ರಮ ಆಯೋಜಿಸಲಾಗಿತ್ತು. ನ್ಯಾ .ಮಂಜುನಾಥ್, ನ್ಯಾ ಪ್ರದೀಪ್ ಪೋತದಾರ್, ಖಲೀಲ್ ಅಹಮ್ಮದ್, ಹಸೀನಾ , ರೇಷ್ಮಾ , ರಂಜಿತ್ ಇದ್ದರು.
Published on
ವಿರಾಜಪೇಟೆ : ರಾಷ್ಟ್ರ ದ ಅಭಿವೃದ್ಧಿಗೆ ಸಾಮಾಜಿಕ ನ್ಯಾಯ ಅವಶ್ಯ. ಸಾಮಾಜಿಕ ನ್ಯಾಯವು ರಾಷ್ಟ್ರಗಳ ಒಳಗೆ ಶಾಂತಿಯುತ ಮತ್ತು ಸಮೃದ್ಧ ಸಹಬಾಳ್ವೆಗೆ ಆಧಾರವಾಗಿರುವ ತತ್ವವಾಗಿದೆ ಎಂದು ವಿರಾಜಪೇಟೆ ಜೆಎಂಎಫ್‌ಸಿಯ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ವಿರಾಜಪೇಟೆ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಮಂಜುನಾಥ್ ಅಭಿಪ್ರಾಯಪಟ್ಟರು.
ತಾಲೂಕು ಕಾನೂನು ಸೇವೆಗಳ ಸಮಿತಿ, ವಿರಾಜಪೇಟೆ ವಕೀಲರ ಸಂಘ, ರೋಟರಿ ಸಂಸ್ಥೆ ಸಹಯೋಗದಲ್ಲಿ ಬಿಟ್ಟಂಗಾಲದ ರೋಟರಿ ಪ್ರಾಢಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ವಿಶ್ವ ಸಾಮಾಜಿಕ ನ್ಯಾಯ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿಶ್ವದಾದ್ಯಂತ ಲಿಂಗ, ವಯಸ್ಸು, ಜನಾಂಗೀಯ, ಧರ್ಮ, ಸಂಸ್ಕೃತಿ, ಬಡತನ, ನಿರುದ್ಯೋಗ, ಶಿಕ್ಷಣ, ವಲಸೆ, ಆರ್ಥಿಕ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ತೊಡೆದು ಹಾಕಲು, ಸಾಮಾಜಿಕ ಅಸಮಾನತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಅದನ್ನು ಸಂಪೂರ್ಣವಾಗಿ ಕಿತ್ತುಹಾಕಲು ಪ್ರತಿ ವರ್ಷ ಫೆ.20ರಂದು ವಿಶ್ವ ಸಾಮಾಜಿಕ ನ್ಯಾಯ ದಿನ ಆಚರಿಸಲಾಗುತ್ತದೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ 2007ರ ಫೆ.20ರಂದು ಈ ದಿನವನ್ನು ಅಂಗೀಕರಿಸಲಾಯಿತು. 2009ರಲ್ಲಿ ಈ ದಿನವನ್ನು ಆಚರಿಸಲು ಅನುಮೋದನೆ ನೀಡಲಾಯಿತು. ಪ್ರತಿ ಸಮಾಜದಲ್ಲು ಐಕ್ಯತೆ, ಸಾಮರಸ್ಯ, ಸೌಹಾರ್ದ, ಮೂಲಭೂತ ಹಕ್ಕುಗಳ ನ್ಯಾಯವಿದ್ದರೆ ಸಮಾಜದ ಅಭಿವೃದ್ಧಿಯಾಗುತ್ತದೆ. ಇದರಿಂದ ದೇಶ ಅಭಿವೃದ್ಧಿಯಾಗುತ್ತದೆ. ದೇಶ ಅಭಿವೃದ್ಧಿಯಾದರೆ ವಿಶ್ವವೇ ಅಭಿವೃದ್ಧಿಯಾಗುತ್ತದೆ ಎಂದರು.
ಜೆಎಂಎಫ್‌ಸಿ ವಿರಾಜಪೇಟೆಯ ಪ್ರಧಾನ ಸಿವಿಲ್ ನ್ಯಾಯಾಧೀಶರು, ವಿರಾಜಪೇಟೆ ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಪ್ರದೀಪ್ ಪೋತದಾರ್ ಮಾತನಾಡಿ, ಜನತೆಯ ಶಾಂತಿಯುತ ಮತ್ತು ಸಮೃದ್ಧ ಸಹಬಾಳ್ವೆಗೆ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ನ್ಯಾಯ ಅತ್ಯವಶ್ಯ. ವಿದ್ಯಾರ್ಥಿಗಳು ಉತ್ತಮ ಗುರಿಯನ್ನಿಟ್ಟುಕೊಂಡು ಸಮಾಜಕ್ಕೆ ಮಾದರಿಯಾಗಿ ಬದುಕಬೇಕು. ದೇಶದ ಏಳಿಗೆಗಾಗಿ ಶ್ರಮಿಸಬೇಕು. ಪ್ರತಿ ವಿದ್ಯಾರ್ಥಿಯೂ ಗುರಿಯನ್ನಿಟ್ಟುಕೊಂಡು ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕು. ಸಮಾಜದೊಂದಿಗೆ ವಿದ್ಯಾರ್ಥಿಗಳು ಬದ್ಧತೆ ಹೊಂದಿರಬೇಕು ಎಂದರು.
ವಿರಾಜಪೇಟೆ ವಕೀಲರ ಸಂಘದ ಅಧ್ಯಕ್ಷ ಸಿ.ಕೆ. ಪೂವಣ್ಣ ಮಾತನಾಡಿ, ಸದುದ್ದೇಶದಿಂದ ಕೂಡಿದವರ ಜತೆ ಸೇರಿದರೆ ನಾವು ಕೂಡ ಸಜ್ಜನರಾಗುತ್ತೇವೆ. ಪ್ರತಿಯೊಬ್ಬರೂ ಒಳಿತಿನಕಡೆಗೆ ಹೆಜ್ಜೆ ಹಾಕಬೇಕು. ಸಮಾಜದ ಸ್ವಾಸ್ಥೃ ಹಾಳುಗೆಡವಬಾರದು. ಪಾಲಕರು ಇದರ ಕಡೆ ಗಮನ ಹರಿಸಬೇಕು ಎಂದರು.
ವಿರಾಜಪೇಟೆ ರೋಟರಿ ಸಂಸ್ಥೆ ಅಧ್ಯಕ್ಷ ಬಿ.ಬಿ ಮಾದಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರೋಟರಿ ಪ್ರೌಢ ಶಾಲೆಯ ಮುಖ್ಯಶಿಕ್ಷಕಿ ಹಸೀನಾ, ವಿರಾಜಪೇಟೆ ರೋಟರಿ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ವಿಶಾಲಾಕ್ಷಿ, ಹಿರಿಯ ವಕೀಲ ಖಲೀಲ್ ಅಹಮ್ಮದ್ ವೇದಿಕೆಯಲ್ಲಿ ಇದ್ದರು.
ರೋಟರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ರೇಷ್ಮಾ, ಪ್ರೌಢಶಾಲೆ ಶಿಕ್ಷಕರಾದ ರಂಜಿತ್, ಚಂದ್ರಶೇಖರ್, ಧನ್ಯಾ ಸೇರಿದಂತೆ ಎಲ್ಲ ಶಿಕ್ಷಕರು, ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net