ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಕೂಡಿಗೆ ಸರ್ಕಾರಿ ಕ್ರೀಡಾ ಶಾಲೆಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕುಶಾಲನಗರ: ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಕೂಡಿಗೆ ಸರ್ಕಾರಿ ಕ್ರೀಡಾ ಶಾಲೆಯಲ್ಲಿ ಮಂಗಳವಾರ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಶ್ವಜ್ಞ ಜಂತುಹುಳು ನಿವಾರಣಾ ದಿನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಜಂತುಹುಳುವಿನಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮದ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರಲ್ಲದೆ, ಅನೀಮಿಯಮುಕ್ತ ಕರ್ನಾಟಕ ಕಾರ್ಯಕ್ರಮಕ್ಕೆ ಪೂರಕವಾಗಿ ವಿದ್ಯಾರ್ಥಿಗಳಿಗೆ ಮಾತ್ರೆ ಸೇವನೆ ಕುರಿತು ವಿವರಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಚಂದ್ರೇಶ್, ಪ್ರಾಥಮಿಕ ಆರೋಗ್ಯ ಸುರಕ್ಷಾತಾಧಿಕಾರಿ ಶಕೀನಾ, ಕೂಡಿಗೆ ಸರ್ಕಾರಿ ಪಿಯು ಕಾಲೇಜು ಪ್ರಾಂಶುಪಾಲ ಎಚ್.ಜೆ.ನಾಗರಾಜ್ ಹಂಡ್ರಂಗಿ, ಕೂಡಿಗೆ ಸರ್ಕಾರಿ ಕ್ರೀಡಾ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಅಶ್ವಿತಾ ಇತರರಿದ್ದರು.