ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ

ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಡಿಎಚ್‌ಒ ಡಾ.ಸತೀಶ್ ಕುಮಾರ್ ಅವರು ಮಕ್ಕಳಿಗೆ ಆಲ್‌ಬೆಂಡಜೋಲ್ ಮಾತ್ರೆ ನೀಡುವ ಮೂಲಕ ಚಾಲನೆ ನೀಡಿದರು. ಡಾ.ಸನತ್ ಕುಮಾರ್, ಕೃಷ್ಣಪ್ಪ, ಸುನಿಲ್ ಇತರರಿದ್ದರು.
ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಡಿಎಚ್‌ಒ ಡಾ.ಸತೀಶ್ ಕುಮಾರ್ ಅವರು ಮಕ್ಕಳಿಗೆ ಆಲ್‌ಬೆಂಡಜೋಲ್ ಮಾತ್ರೆ ನೀಡುವ ಮೂಲಕ ಚಾಲನೆ ನೀಡಿದರು. ಡಾ.ಸನತ್ ಕುಮಾರ್, ಕೃಷ್ಣಪ್ಪ, ಸುನಿಲ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ

ಮಡಿಕೇರಿ: ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ೧ ರಿಂದ ೧೯ ವರ್ಷದೊಳಗಿನ ಮಕ್ಕಳಿಗೆ ಆಲ್‌ಬೆಂಡಜೋಲ್ ಮಾತ್ರೆ ನೀಡುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಮಕ್ಕಳಲ್ಲಿನ ಅಪೌಷ್ಟಿಕತೆ ಹಾಗೂ ರಕ್ತಹೀನತೆ ತಡೆಯುವಲ್ಲಿ ಆಲ್‌ಬೆಂಡಜೋಲ್ ಮಾತ್ರೆ ಸಹಕಾರಿಯಾಗಿದೆ. ಆ ನಿಟ್ಟಿನಲ್ಲಿ ಮಕ್ಕಳಿಗೆ ಮಾತ್ರೆ ಕೊಡಿಸಬೇಕು. ದೇಶದಾಧ್ಯಂತ ಆ.೧೦ ರಂದು ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮ ಹಾಗೂ ಆ.೧೭ ರಂದು ಮಾಪ್ ಆಪ್ ಡೇ ಕಾರ್ಯಕ್ರಮ ನಡೆಯುತ್ತಿದ್ದು, ೧-೧೯ ವ?ರ್ದ ಒಳಗಿನ ಎಲ್ಲಾ ಮಕ್ಕಳಿಗೆ ಆಲ್‌ಬೆಂಡಜೋಲ್-೪೦೦ ಎಂಜಿ ಮಾತ್ರೆ ನೀಡಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ವಿವರಿಸಿದರು.
ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ ಫೆ.೧೦, ೨೦೧೫ರಲ್ಲಿ ಪ್ರಾರಂಭ ಮಾಡಲಾಗಿದ್ದು, ಮೊದಲಿಗೆ ೧೧ ರಾಜ್ಯಗಳಲ್ಲಿ ಇದನ್ನು ಜಾರಿಗೆ ತರಲಾಯಿತು. ೨೦೧೮ ಫೆಬ್ರವರಿಯಲ್ಲಿ ಈ ಕಾರ್ಯಕ್ರಮವನ್ನು ೩೪ ರಾಜ್ಯಗಳಿಗೆ ವಿಸ್ತರಣೆ ಮಾಡಲಾಗಿದ್ದು, ಇದೀಗ ೧೯ ನೇ ಸುತ್ತಿನ ಕಾರ್ಯಕ್ರಮವಾಗಿರುತ್ತದೆ. ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದಲ್ಲಿ ೧-೫ ವರ್ಷದ ಒಳಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಮಾತ್ರೆ ನೀಡಲಾಗುತ್ತದೆ. ೬-೧೯ ವರ್ಷದ ಮಕ್ಕಳಿಗೆ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ-ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ. ಆಶಾ ಕಾರ್ಯಕರ್ತೆಯರು ೬-೧೯ ವರ್ಷದ ಒಳಗಿನ ಶಾಲೆಯಿಂದ ಹೊರಗುಳಿದ ಫಲಾನುಭವಿಗಳ ಪಟ್ಟಿಯನ್ನು ತಯಾರಿಸಿ ಅವರಿಗೆ ಅಂಗನವಾಡಿಗಳಲ್ಲಿ ಮಾತ್ರೆ ನೀಡಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ೧-೨ ವರ್ಷದ ಮಕ್ಕಳಿಗೆ ಅರ್ಧ ಆಲ್‌ಬೆಂಡಜೋಲ್ ಮಾತ್ರೆ ಹಾಗೂ ೨-೧೯ ವರ್ಷದ ಮಕ್ಕಳಿಗೆ ಒಂದು ಆಲ್‌ಬೆಂಡಜೋಲ್ ಮಾತ್ರೆ ನೀಡಬೇಕಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ, ಸ್ವಚ್ಚ ಭಾರತ್ ಮಿಷನ್, ಪಂಚಾಯತ್ ರಾಜ್, ಮುನ್ಸಿಪಲ್ ಕಾರ್ಪೋರೇಷನ್ ಇಲಾಖೆಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಆರ್‌ಸಿಎಚ್ ಅಧಿಕಾರಿ ಡಾ.ಸನತ್ ಕುಮಾರ್ ಮಾತನಾಡಿ, ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ ನಮ್ಮ ಜಿಲ್ಲೆಯಲ್ಲಿ ೧-೧೯ ವರ್ಷದೊಳಗಿನ ಮಕ್ಕಳ ಗುರಿ ೧,೨೦,೮೭೪ ಹೊಂದಿದೆ. ಇದರಲ್ಲಿ ಅಂಗನವಾಡಿ ಮಕ್ಕಳು ೨೩,೬೩೪, ಅಂಗನವಾಡಿಯಿಂದ ಹೊರಗುಳಿದ ಮಕ್ಕಳು ೯೫೫, ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಯಲ್ಲಿರುವ ಮಕ್ಕಳು ೮೦,೫೦೬ ಹಾಗೂ ಪದವಿ ಪೂರ್ವ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ೯೧೩೫, ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ೩೭೦೦, ಐಟಿಐ ಮತ್ತು ತಾಂತ್ರಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ೪೭೩ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳು ೨೪೭೧ ಇರುತ್ತಾರೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭ ಶಾಲಾ ಶಿಕ್ಷಣ ಇಲಾಖೆ ಡಿವೈಪಿಸಿ ಕೃಷ್ಣಪ್ಪ ಮಾತನಾಡಿದರು. ತಾಲ್ಲೂಕು ವೈದ್ಯಾಧಿಕಾರಿ ಸುನಿಲ್, ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಪಾಲಾಕ್ಷ, ದೇವರಾಜು, ದಿವಾಕರ, ಶಾಲೆಯ ಮುಖ್ಯೋಪಾಧ್ಯಯರು ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net