ರಾಷ್ಟ್ರ ಮಟ್ಟದ ಕರಾಟೆ: ವಿದ್ಯಾರ್ಥಿಗಳ ಸಾಧನೆ

ಮೈಸೂರಿನ ಚಾಮುಂಡಿ ವಿಹಾರ್ ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಇನ್‌ಡಿಪೆಂಡೆನ್ಸ್ ಕಪ್-೨೦೨೬ ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ಸಾಧನೆ ಮಾಡಿದ ಮೂರ್ನಾಡು ಎಜುಕೇಷನ್ ಸೊಸೈಟಿಯ ವಿದ್ಯಾರ್ಥಿಗಳು.
ಮೈಸೂರಿನ ಚಾಮುಂಡಿ ವಿಹಾರ್ ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಇನ್‌ಡಿಪೆಂಡೆನ್ಸ್ ಕಪ್-೨೦೨೬ ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ಸಾಧನೆ ಮಾಡಿದ ಮೂರ್ನಾಡು ಎಜುಕೇಷನ್ ಸೊಸೈಟಿಯ ವಿದ್ಯಾರ್ಥಿಗಳು.
Published on

ಪ್ರಮುಖ ಮುಖ್ಯಾಂಶಗಳು

  • ರಾಷ್ಟ್ರ ಮಟ್ಟದ ಕರಾಟೆ: ವಿದ್ಯಾರ್ಥಿಗಳ ಸಾಧನೆ

ಮಡಿಕೇರಿ: ಒಕಿನೊವ ಷೋರಿನ್-ರಿಯೋ ಕರಾಟೆ ಸಂಸ್ಥೆಯ ವತಿಯಿಂದ ಮೈಸೂರಿನ ಚಾಮುಂಡಿ ವಿಹಾರ್ ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಇನ್‌ಡಿಪೆಂಡೆನ್ಸ್ ಕಪ್-೨೦೨೬ ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ಮೂರ್ನಾಡಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.

ಮೂರ್ನಾಡು ಎಜುಕೇಷನ್ ಸೊಸೈಟಿಯ ವಿದ್ಯಾರ್ಥಿಗಳಾದ ಯು.ಎಸ್.ಅಲೈನಾ ಅವರು ಕರಾಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಹಾಗೂ ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಟ್ರೋಫಿಗಳಿಸಿದ್ದಾರೆ. ಬಿ.ಆರ್.ರಿಫಾ ಫಾತಿಮಾ ಅವರು, ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಹಾಗೂ ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಟ್ರೋಫಿ ಪಡೆದಿದ್ದಾರೆ. ಬಿ.ಎನ್.ವರ್ಷಾ ಅವರು ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕ ಗಳಿಸಿದ್ದಾರೆ.
ಮೂರ್ನಾಡು ಹೈಸ್ಕೂಲ್‌ನ ವಿದ್ಯಾರ್ಥಿಗಳಾದ ಬಿಪಿನ್ ಬಿ.ಎಂ.ಚಿನ್ನಪ್ಪ ಅವರು, ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಹಾಗೂ ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಟ್ರೋಫಿಗಳಿಸಿದ್ದಾರೆ. ದುಷ್ಯಂತ್.ಕೆ.ವಿ.ಮುತ್ತಣ್ಣ ಅವರು ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಹಾಗೂ ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಟ್ರೋಫಿ ಪಡೆದಿದ್ದಾರೆ. ಪಿ.ಸತೀಶ್ ಅವರು, ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಪಡೆದು ಹಾಗೂ ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನಗಳಿಸಿದ್ದಾರೆ. ಜಿತೇಂದ್ರ ರಾತೋರ್ ಮತ್ತು ಟಿ.ಎಂ.ಆದಿ ಬೋಪಣ್ಣ ಅವರು ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕಗಳಿಸಿದ್ದಾರೆ.
ಚೇರಂಬಾಣೆಯ ಜಿ.ಹೆಚ್.ಪಿ ಶಾಲೆಯ ಎಂ.ಕೆ.ಶ್ರಾವ್ಯ ಅವರು, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕಗಳಿಸಿದ್ದಾರೆ. ಪಂದ್ಯಾವಳಿಯಲ್ಲಿ ದೇಶದ ವಿವಿಧೆಡೆಯಿಂದ ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದರು. ಸಾಧನೆ ಮಾಡಿದ ವಿದ್ಯಾರ್ಥಿಗಳು ಶಾಲೆಗೆ ಹಾಗೂ ನಾಡಿಗೆ ಕೀರ್ತಿ ತಂದಿದ್ದಾರೆ. ರಾಷ್ಟ್ರೀಯ ತೀರ್ಪುಗಾರ ಹಾಗೂ ಮಾಜಿ ಸೈನಿಕ ಜಿ.ನಾಗೇಂದ್ರಪ್ಪ ಮತ್ತು ಬ್ಲ್ಯಾಕ್ ಬೆಲ್ಟ್ ಎಂ.ಎನ್.ಪವನ್ ಅವರಿಂದ ವಿದ್ಯಾರ್ಥಿಗಳು ತರಬೇತಿ ಪಡೆದಿದ್ದಾರೆ. ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಮುಖ್ಯ ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net