ಈ ವಿಚಾರ ಸಂಕಿರಣದಲ್ಲಿ ಪ್ರಾಥಮಿಕ ಶಾಲಾ ಹಂತದ ಕನ್ನಡ ಬೋಧಕರಿಂದ ಹಿಡಿದು ಪ್ರೌಢಶಾಲಾ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಪದವಿಗಳ ಕನ್ನಡ ಭಾಷಾ ಬೋಧಕರು, ಭಾಷಾ ತಜ್ಞರು, ಬರಹಗಾರರು, ಕವಿಗಳು, ಸಂಪನ್ಮೂಲ ವ್ಯಕ್ತಿಗಳು, ಸಂಶೋಧನಾ ಅಭ್ಯರ್ಥಿಗಳು, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಮತ್ತು ಕನ್ನಡ ಪರ ಹೋರಾಟದ ನಾಯಕರು ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಯಾವುದೇ ನೋಂದಣಿ ಶುಲ್ಕವಿರುವುದಿಲ್ಲ. ವಿಚಾರ ಸಂಕಿರಣದಲ್ಲಿ ಭಾಗವಹಿಸುವವರಿಗೆ ಆಹಾರದ ವ್ಯವಸ್ಥೆಯೊಂದಿಗೆ, ಪ್ರಮಾಣ ಪತ್ರ ಹಾಗೂ ಉಚಿತ ಕಿಟ್ ನೀಡಲಾಗುವುದು ಎಂದರು.