ಕರಡಿಗೋಡು ನದಿ ತೀರಕ್ಕೆ ಎನ್‌ಡಿಆರ್‌ಎಫ್ ತಂಡ ಭೇಟಿ

ಕರಡಿಗೋಡು ಪ್ರವಾಹ ಪೀಡಿತ ಪ್ರದೇಶಕ್ಕೆ ಎನ್‌ಡಿಆರ್‌ಎಫ್ ತಂಡ ಭೇಟಿ ನೀಡಿ ಪರಿಶೀಲಿಸಿತು.
ಕರಡಿಗೋಡು ಪ್ರವಾಹ ಪೀಡಿತ ಪ್ರದೇಶಕ್ಕೆ ಎನ್‌ಡಿಆರ್‌ಎಫ್ ತಂಡ ಭೇಟಿ ನೀಡಿ ಪರಿಶೀಲಿಸಿತು.
Published on
ಸಿದ್ದಾಪುರ: ಸಂಭವನೀಯ ಪ್ರವಾಹ ಪೀಡಿತ ಪ್ರದೇಶಗಳಾದ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು ಗ್ರಾಮದ ನದಿ ತೀರಕ್ಕೆ ಎನ್‌ಡಿಆರ್‌ಎಫ್ (ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ) ಅಧಿಕಾರಿಗಳು ಹಾಗೂ ಸಿಬ್ಬಂದಿ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿ ಆದೇಶದ ಮೇರೆಗೆ ಅಧಿಕಾರಿಗಳಾದ ಅನನ್ಯ ವಾಸುದೇವ ಹಾಗೂ ರಾಮ್ ಬೋಜ್ ನೇತೃತ್ವದ 30 ಸದಸ್ಯರ ತಂಡ ಸ್ಥಳಕ್ಕೆ ಆಗಮಿಸಿ ನದಿ ತೀರದ ಪರಿಸ್ಥಿತಿ ಅವಲೋಕಿಸಿತು. ಅಲ್ಲದೆ, ಮಳೆಗಾಲದಲ್ಲಿ ಸಂಭವಿಸಬಹುದಾದ ಪ್ರವಾಹ ಪರಿಸ್ಥಿತಿ ಎದುರಿಸಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ವಿರಾಜಪೇಟೆ ತಹಸೀಲ್ದಾರ್ ಪ್ರವೀಣ್ ಕುಮಾರ್, ಅಮ್ಮತ್ತಿ ಹೋಬಳಿ ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್, ಗ್ರಾಮ ಆಡಳಿತ ಅಧಿಕಾರಿಗಳಾದ ಸಚಿನ್ ಕುಲಕರ್ಣಿ, ಓಮಪ್ಪ ಬಣಕರ್, ಅನೀಶ್ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು. ಪ್ರವಾಹದ ಸಂದರ್ಭ ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಸೂಚನೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net