ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಗತ್ಯ ನೆರವು

ಅಭ್ಯತ್ ಮಂಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ತಪಾಸಣೆ ಮಾಡುತ್ತಿರುವುದು
ಅಭ್ಯತ್ ಮಂಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ತಪಾಸಣೆ ಮಾಡುತ್ತಿರುವುದು
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಡಾ.ಮಂತರ್ ಗೌಡ ಭರವಸೆ
  • ಆರೋಗ್ಯ ಉಚಿತ ತಪಾಸಣೆ ಶಿಬಿರ
ಸಿದ್ದಾಪುರ: ಹಣ, ಆಸ್ತಿ ಹಾಗೂ ಭೌತಿಕ ಸಂಪತ್ತುಗಳನ್ನು ಕಸಿದುಕೊಳ್ಳಬಹುದು. ಆದರೆ ವಿದ್ಯೆ ಎಂಬ ಶಾಶ್ವತ ಸಂಪತ್ತನ್ನು ಯಾರಿಂದಲೂ ಕದಿಯಲು ಸಾಧ್ಯವಿಲ್ಲ ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.
ಅಭ್ಯತ್ ಮಂಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿಲ್ ಬ್ಲೂಮ್ ಹೆಲ್ತ್ ಕೇರ್ ಹಾಗೂ ಎಸ್‌ಎಲ್‌ವಿ ಗ್ರೂಪ್ ಬುಕ್ ಹೌಸ್ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣೆ ಶಿಬಿರ ಹಾಗೂ ನೋಟ್‌ಬುಕ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸುವ ಮೂಲಕ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಎಲ್ಲರೂ ಕೈಜೋಡಿಸಬೇಕು. ಶಾಲೆಯ ಅಭಿವೃದ್ಧಿಗೆ ಶಾಸಕರ ನಿಧಿಯಿಂದ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು.
ಬಳಿಕ ಗ್ರಾಮಸ್ಥರಿಗೆ ಏರ್ಪಡಿಸಿದ್ದ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿದರು. ಹಿಲ್ ಬ್ಲೂಮ್ ಹೆಲ್ತ್ ಕೇರ್‌ನ ವೈದ್ಯಾಧಿಕಾರಿ ಡಾ.ನಿತ್ಯಪ್ರಿಯ ನೇತೃತ್ವದ ತಂಡವು ಗ್ರಾಮಸ್ಥರಿಗೆ ರಕ್ತದೊತ್ತಡ, ಮಧುಮೇಹ ಸೇರಿದಂತೆ ವಿವಿಧ ಆರೋಗ್ಯ ತಪಾಸಣೆ ನಡೆಸಿತು. ಎಸ್‌ಎಲ್‌ವಿ ಗ್ರೂಪ್ ವತಿಯಿಂದ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಲಕ್ಷ್ಮಣ, ಶಮೀನಾ ಅಶ್ರಫ್, ಪಿಡಿಒ ಮಾದಪ್ಪ, ಯಶ್ ಧೋಲ್ಪಾಡಿ, ಸುನೀತಾ ಮಂಜುನಾಥ್, ಸಮದ್,ಎ.ಎಂ. ಹನೀಫ್, ಮಜೀದ್, ಮಣಿ, ದಾನಿ ಮಂಜುನಾಥ್ ಕೆದಂಬಾಡಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಅಶ್ರಫ್, ಗ್ರಾಮಸ್ಥರು ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net