ಸರ್ಕಾರದ ಯಾವುದೇ ಅನುದಾನವಿಲ್ಲದೆ ಜಿಲ್ಲೆಯ ಹಲವು ಬರಹಗಾರರು, ಸಾಹಿತಿಗಳು ಬರೆದ ಕೊಡವ, ಕನ್ನಡ, ಇಂಗ್ಲೀಷ್, ಹಿಂದಿ ಸೇರಿದಂತೆ ಮಹತ್ವಾಕಾಂಕ್ಷೆಯ ೧೨೩ ಪುಸ್ತಕವನ್ನು ಸಾಹಿತ್ಯ ಕ್ಷೇತ್ರಕ್ಕೆ ಸಮರ್ಪಿಸಲಾಗಿದ್ದು, ಐದು ಪುಸ್ತಕಗಳಿಗೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಅಲ್ಲದೆ ಹೊಸ ಬರಹಗಾರರಿಗೆ ಪ್ರೋತ್ಸಾಹ ನೀಡುವ ಮೂಲಕ ಅವರ ಪ್ರಥಮ ಪುಸ್ತಕವನ್ನು ಕೊಡವ ಮಕ್ಕಡ ಕೂಟದ ವತಿಯಿಂದ ಹೊರತರಲಾಗಿದೆ. ಕೊಡವ ಮಕ್ಕಡ ಕೂಟದ ವಾರ್ಷಿಕೋತ್ಸವದ ನೆನಪಿಗಾಗಿ ಫೆ.೧೮ ರಂದು ೧೨೫ ಮತ್ತು ೧೨೬ನೇ ಪುಸ್ತಕವನ್ನು ಲೋಕಾರ್ಪಣೆ ಮಾಡಲಿದ್ದೇವೆ ಎಂದು ತಿಳಿಸಿದರು.