ಕ್ರೀಡಾಪಟುಗಳಿಗಿಲ್ಲ ಸರ್ಕಾರದ ಪ್ರೋತ್ಸಾಹ

ಯಂಗ್ ಇಂಡಿಯಾ ಯೂಥ್ ಕ್ಲಬ್ ನ 55ನೇ ಸುವರ್ಣ ಮಹೋತ್ಸವದ ಸಂಭ್ರಮಕ್ಕಾಗಿ ರಾಷ್ಟ್ರೀಯ ಮಟ್ಟದ ಮುಕ್ತ 5 ಫುಟ್ಬಾಲ್ ಪಂದ್ಯಾವಳಿಗೆ ಪಾಲಿಬೆಟ್ಟ ಕ್ರೀಡಾ ಮೈದಾನದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು
ಯಂಗ್ ಇಂಡಿಯಾ ಯೂಥ್ ಕ್ಲಬ್ ನ 55ನೇ ಸುವರ್ಣ ಮಹೋತ್ಸವದ ಸಂಭ್ರಮಕ್ಕಾಗಿ ರಾಷ್ಟ್ರೀಯ ಮಟ್ಟದ ಮುಕ್ತ 5 ಫುಟ್ಬಾಲ್ ಪಂದ್ಯಾವಳಿಗೆ ಪಾಲಿಬೆಟ್ಟ ಕ್ರೀಡಾ ಮೈದಾನದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು
Published on

ಪ್ರಮುಖ ಮುಖ್ಯಾಂಶಗಳು

  • ಗ್ರಾಮೀಣ ಭಾಗದಲ್ಲಿ ಸುಸಜ್ಜಿತ ಮೈದಾನದ ಕೊರತೆ
  • ಮೂಕೂಂಡ ವಿಜು ಸುಬ್ರಮಣಿ ಬೇಸರ
  • ಪಾಲಿಬೆಟ್ಟದಲ್ಲಿ ರಾಷ್ಟ್ರೀಯ ಮಟ್ಟದ ಪುಟ್ಬಾಲ್ ಪಂದ್ಯಾವಳಿಗೆ ಚಾಲನೆ
ಸಿದ್ದಾಪುರ: ಕ್ರೀಡಾಪಟುಗಳಿಗೆ ಸರ್ಕಾರದ ಪ್ರೋತ್ಸಾಹದ ಕೊರತೆ ಇದೆ. ಗ್ರಾಮೀಣ ಭಾಗದಲ್ಲಿ ಸುಸಜ್ಜಿತ ಮೈದಾನದ ವ್ಯವಸ್ಥೆ ಇಲ್ಲದೆ ಕ್ರೀಡಾಪಟುಗಳು ಕ್ರೀಡೆಯಿಂದ ವಂಚಿತರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಾಮಾಜಿಕ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮೂಕೂಂಡ ವಿಜು ಸುಬ್ರಮಣಿ ಬೇಸರ ವ್ಯಕ್ತಪಡಿಸಿದರು.
ಪಾಲಿಬೆಟ್ಟ ಕ್ರೀಡಾ ಮೈದಾನದಲ್ಲಿ ಯಂಗ್ ಇಂಡಿಯಾ ಯೂತ್ ಕ್ಲಬ್‌ನ 55ನೇ ಸುವರ್ಣ ಮಹೋತ್ಸವದ ಸಂಭ್ರಮಕ್ಕಾಗಿ ರಾಷ್ಟ್ರಮಟ್ಟದ ಮುಕ್ತ 5 ಫುಟ್ಬಾಲ್ ಪಂದ್ಯಾವಳಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿ, ಮೈದಾನದ ವ್ಯವಸ್ಥೆ ಸೇರಿದಂತೆ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕೆಂದು ಜಿಲ್ಲಾಡಳಿತವನ್ನು ಒತ್ತಾಯಿಸಿದರು.
ಗ್ರಾಮೀಣ ಭಾಗದಲ್ಲಿ ರಾಷ್ಟ್ರೀಯ ಮಟ್ಟದ ಫುಟ್ಬಾಲ್ ಪಂದ್ಯಾವಳಿ ನಡೆಯುತ್ತಿರುವುದು ಜಿಲ್ಲೆಯ ಕ್ರೀಡಾಪಟುಗಳಿಗೆ ರಾಜ್ಯ, ರಾಷ್ಟ್ರಮಟ್ಟದ ಆಟಗಾರನ್ನು ಪರಿಚಯಿಸುವ ಮೂಲಕ ಯಂಗ್ ಇಂಡಿಯಾ ಯೂತ್ ಕ್ಲಬ್ ಮಾದರಿಯಾಗಿದೆ. 55 ವರ್ಷ ಪೂರೈಸಿರುವ ಯಂಗ್ ಇಂಡಿಯಾ ಯುವಕ ಸಂಘದ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ಸುಸಜ್ಜಿತ ನೂತನ ಕಟ್ಟಡ ನಿರ್ಮಾಣಕ್ಕೆ ಜಿಲ್ಲೆಯ ದಾನಿಗಳ ಹೆಚ್ಚಿನ ಪ್ರೋತ್ಸಾಹ ಅಗತ್ಯವಾಗಿದೆ ಎಂದು ತಿಳಿಸಿದರು.
ಉದ್ಘಾಟನೆ ಕಾರ್ಯಕ್ರಮದ ಅಂಗವಾಗಿ ಸಿಡಿಮದ್ದು ಪ್ರದರ್ಶನ ನಡೆಯಿತು. ಚುಮು ಚುಮು ಚಳಿ ನಡುವೆಯೂ ಫುಟ್ಬಾಲ್ ಪಂದ್ಯಾವಳಿ ವೀಕ್ಷಣೆಗೆ ವಿವಿಧೆಡೆಗಳಿಂದ ಆಗಮಿಸಿದ ಕ್ರೀಡಾಭಿಮಾನಿಗಳು ವಿವಿಧ ರಾಜ್ಯಗಳಿಂದ ಆಗಮಿಸಿದ ಆಟಗಾರರಿಗೆ ಹುರಿದುಂಬಿಸಿದರು.
ಯಂಗ್ ಇಂಡಿಯಾ ಯೂತ್‌ಕ್ಲಬ್‌ನ ಅಧ್ಯಕ್ಷ ಪಿ.ಎ.ಸಲೀಂ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಅಜಿತ್ ಕರುಂಬಯ್ಯ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಗಣೇಶ್, ಸಿಎಸ್‌ಐ ಚರ್ಚ್‌ನ ರೇವ್ ಶಶಿಕುಮಾರ್, ಸೇವಾದಳದ ರಾಜ್ಯ ಸಮಿತಿ ಪ್ರಮುಖರಾದ ತೆರೆಸ ವಿಕ್ಟರ್, ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಸಾಬು ಕಾಳಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕುಟ್ಟಂಡ ವಸಂತ್, ಅಮ್ಮತ್ತಿ ಮಿಲನ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಲೆಜೆಸ್, ಕ್ಯಾಪ್ಟನ್ ಇಲೆವೆನ್ ಸಂಘದ ಅಧ್ಯಕ್ಷ ರವಿಕುಮಾರ್, ಸಮಾಜ ಸೇವಕರಾದ ಕುಟ್ಟಂಡ ದೇಚಿ, ವಿಜೇಶ್, ಅಬೂಬಕ್ಕರ್, ಸಿದ್ದೀಕ್, ಮುಸ್ತಫಾ, ವಿನೋದ್, ಹರೀಶ್, ಸಬೀರ್, ಸಾಗರ್ ರದೀಸ್, ವಿನೋ ಸೋಮಣ್ಣ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net