ಜ್ವರ, ಕೆಮ್ಮು, ಶೀತ, ಸೋಂಕು, ರಕ್ತದೊತ್ತಡ, ಮಧುಮೇಹ ಸೇರಿದಂತೆ ಸಾಮಾನ್ಯ ಕಾಯಿಲೆಗಳಿಗೆ ಅಗತ್ಯವಿರುವ ಔಷಧಗಳೂ ಹಲವು ಬಾರಿ ಲಭ್ಯವಿರುವುದಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಆಸ್ಪತ್ರೆಯ ಔಷಧ ವಿತರಣಾ ವಿಭಾಗದಲ್ಲಿ ಔಷಧ ಇಲ್ಲ ಎಂಬ ಉತ್ತರ ಸಿಗುತ್ತಿದ್ದು, ರೋಗಿಗಳು ಅನಿವಾರ್ಯವಾಗಿ ಮೆಡಿಕಲ್ ಶಾಪ್‌ಗಳಿಗೆ ತೆರಳಬೇಕಾಗಿದೆ.