ಇತ್ತೀಚಿನ ದಿನಗಳಲ್ಲಿ ಹರಿದಾಡುತ್ತಿರುವ ಕೆಲವು ವರದಿಗಳು ಮತ್ತು ಚರ್ಚೆಗಳು ಕೊಡಗಿನ ಮೂಲಕ ರೈಲು ಮಾರ್ಗ ಹಾದುಹೋಗುವ ಸಾಧ್ಯತೆಯ ಬಗ್ಗೆ ಸಾರ್ವಜನಿಕರ ಒಂದು ವಲಯದಲ್ಲಿ ಆತಂಕ ಉಂಟುಮಾಡಿವೆ. ಆದರೆ, ರೈಲ್ವೇ ಸಚಿವರೊಂದಿಗೆ ನಡೆದ ಮಾತುಕತೆಯಲ್ಲಿ ಇಂತಹ ಯಾವುದೇ ಪ್ರಸ್ತಾವನೆ ಪ್ರಸ್ತುತ ಸಚಿವಾಲಯದ ಪರಿಗಣನೆಯಲ್ಲಿಲ್ಲ ಎಂಬುದು ದೃಢಪಟ್ಟಿದೆ. ಪ್ರದೇಶಕ್ಕೆ ಸಂಬAಧಿಸಿದ ಯಾವುದೇ ಭವಿಷ್ಯದ ಮೂಲಸೌಕರ್ಯ ಯೋಜನೆಯನ್ನು ಕೈಗೊಳ್ಳುವ ಮೊದಲು ಎಲ್ಲಾ ಹಿತಾಸಕ್ತಿ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಹಾಗೂ ಜಿಲ್ಲೆಯ ಪರಿಸರ, ಪರಿಸ್ಥಿತಿ ಮತ್ತು ಅಭಿವೃದ್ಧಿ ಸಂಬAಧಿತ ಹಿತಾಸಕ್ತಿಗಳನ್ನು ಪರಿಗಣಿಸಲಾಗುವುದು.